Publish Date: Fri, 13 Dec 2019 (08:55 IST)
Updated Date: Fri, 13 Dec 2019 (08:57 IST)
ಚೆನ್ನೈ: ಟಿ20 ಸರಣಿ ಭರ್ಜರಿ ಗೆಲುವಿನ ಬೆನ್ನಲ್ಲೇ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾ ಸಿದ್ಧವಾಗಿದ್ದು, ಮೊದಲ ಪಂದ್ಯ ಆಡಲು ಚೆನ್ನೈಗೆ ಬಂದಿಳಿದೆ.
ಭಾನುವಾರ ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯ ಚೆನ್ನೈನ ಚಿಪಾಕ್ ಮೈದಾನದಲ್ಲಿ ನಡೆಯಲಿದೆ. ಇದಕ್ಕಾಗಿ ಉಭಯ ತಂಡಗಳು ನಿನ್ನೆಯೇ ಚೆನ್ನೈಗೆ ಬಂದಿಳಿದಿವೆ.
ಏಕದಿನ ರ್ಯಾಂಕಿಂಗ್ ನಲ್ಲಿ ನಂ.1 ತಂಡವಾಗಿರುವ ಟೀಂ ಇಂಡಿಯಾ ಮತ್ತೊಂದು ಸರಣಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಇಂದಿನಿಂದ ಅಭ್ಯಾಸ ಆರಂಭಿಸುವ ನಿರೀಕ್ಷೆಯಿದೆ.