ವಿಶಾಖಪಟ್ಟಣ ತಲುಪಿದ ಟೀಂ ಇಂಡಿಯಾ: ವಿರಾಟ್ ಕೊಹ್ಲಿಗಾಗಿ ಕಾದಿದೆ ದಾಖಲೆ

Webdunia
ಮಂಗಳವಾರ, 23 ಅಕ್ಟೋಬರ್ 2018 (08:32 IST)
ವಿಶಾಖಪಟ್ಟಣ: ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ಟೀಂ ಇಂಡಿಯಾ ನಿನ್ನೆ ಸಂಜೆ ವಿಶಾಖಪಟ್ಟಣಕ್ಕೆ ಬಂದಿಳಿದಿದೆ.

ದ್ವಿತೀಯ ಪಂದ್ಯ ಇಲ್ಲಿ ನಡೆಯಲಿದ್ದು, ಇಲ್ಲಿನ ವಿಮಾನ ನಿಲ್ದಾಣಕ್ಕೆ ಟೀಂ ಇಂಡಿಯಾ ಆಟಗಾರರು ಆಗಮಿಸಿದಾಗ ಭರ್ಜರಿ ಸ್ವಾಗತ ದೊರಕಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಜತೆಗೆ ವಿಂಡೀಸ್ ತಂಡವೂ ಇಲ್ಲಿಗೆ ಬಂದಿಳಿದಿದೆ.

ಇನ್ನು, ಕಳೆದ ಪಂದ್ಯದಲ್ಲಿ ಶತಕ ದಾಖಲಿಸಿ  ದಾಖಲೆಗಳನ್ನೇ ಮಾಡಿದ್ದ ವಿರಾಟ್ ಕೊಹ್ಲಿಗೆ ಇಲ್ಲಿಯೂ ಮಹತ್ವದ ದಾಖಲೆ ಮಾಡುವ ಅವಕಾಶ ಎದುರಾಗಿದೆ. ಇನ್ನು 81 ರನ್ ಗಳಿಸಿದರೆ ಕೊಹ್ಲಿ ಏಕದಿನ ಪಂದ್ಯದಲ್ಲಿ 10000 ರನ್ ಪೂರೈಸಿದ ದಾಖಲೆ ಮಾಡಲಿದ್ದಾರೆ. ಜತೆಗೆ ಅತೀ ವೇಗವಾಗಿ ಏಕದಿನ ಪಂದ್ಯಗಳಲ್ಲಿ 10 ಸಾವಿರ ರನ್ ಪೂರೈಸಿದ ದಾಖಲೆ ಮಾಡಲಿದ್ದಾರೆ. 259 ಇನಿಂಗ್ಸ್ ಗಳಿಂದ ಸಚಿನ್ ಈ ದಾಖಲೆ ಮಾಡಿ ಅಗ್ರಸ್ಥಾನದಲ್ಲಿದ್ದಾರೆ. ಆದರೆ 212 ಏಕದಿನ ಪಂದ್ಯಗಳನ್ನಾಡಿರುವ ಕೊಹ್ಲಿ 10 ಸಾವಿರ ರನ್ ಪೂರೈಸಿದರೆ ತೆಂಡುಲ್ಕರ್ ದಾಖಲೆ ಪತನವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments