ಖಾಸಗಿ ರೂಂ ವಿಡಿಯೋ ಶೇರ್ ಮಾಡಿದ್ದಕ್ಕೆ ವಿರಾಟ್ ಕೊಹ್ಲಿ ಗರಂ!

Webdunia
ಸೋಮವಾರ, 31 ಅಕ್ಟೋಬರ್ 2022 (12:10 IST)
WD
ಪರ್ತ್: ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿಯ ಖಾಸಗಿ ಬದುಕಿನ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳಿಗೆ ವಿಪರೀತ ಕುತೂಹಲವಿರುತ್ತದೆ. ಇದೇ ರೀತಿ ಹೋಟೆಲ್ ಸಿಬ್ಬಂದಿಯೊಬ್ಬರು ಮಾಡಲು ಹೋಗಿ ಇದೀಗ ಕೊಹ್ಲಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಟಿ20 ವಿಶ್ವಕಪ್ ಆಡಲು ಪರ್ತ್ ಹೋಟೆಲ್ ನಲ್ಲಿ ನೆಲೆಸಿರುವ ಕೊಹ್ಲಿ ಕೊಠಡಿಯನ್ನು ಯಾರೋ ಹೋಟೆಲ್ ಸಿಬ್ಬಂದಿಗಳೇ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದು ಕೊಹ್ಲಿ ಗಮನಕ್ಕೆ ಬಂದಿದ್ದು, ವಿಡಿಯೋ ಶೇರ್ ಮಾಡಿರುವ ಕೊಹ್ಲಿ ನಾವು ಮನರಂಜನೆಯ ವಸ್ತುಗಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅಭಿಮಾನಿಗಳಿಗೆ ನಮ್ಮನ್ನು ಭೇಟಿ ಮಾಡುವುದು, ನಮ್ಮ ಬಗ್ಗೆ ತಿಳಿದುಕೊಳ್ಳಲು ಖುಷಿಯಿರುತ್ತದೆ ಎಂಬುದು ನನಗೆ ಗೊತ್ತು. ಆದರೆ ಈ ವಿಡಿಯೋ ಎಲ್ಲೆ ಮೀರಿದೆ. ಇದು ನನ್ನ ಖಾಸಗಿತನಕ್ಕೆ ಧಕ್ಕೆ ಎನಿಸುತ್ತಿದೆ. ನನ್ನ ಹೋಟೆಲ್ ರೂಂನಲ್ಲೇ ನನಗೆ ಪ್ರೈವೆಸಿ ಇಲ್ಲ ಎಂದಾದರೆ ಬೇರೆ ಎಲ್ಲಿ ನಾನು ನಿರೀಕ್ಷಿಸಬೇಕು? ಇಂತಹ ಮಿತಿ ಮೀರಿದ ಅಭಿಮಾನ ನನಗೆ ಖಂಡಿತಾ ಇಷ್ಟವಿಲ್ಲ. ಜನರ ಖಾಸಗಿತನವನ್ನು ಗೌರವಿಸಿ ಮತ್ತು ಅವರನ್ನು ಮನರಂಜನೆಯ ವಸ್ತುಗಳಾಗಿ ಟ್ರೀಟ್ ಮಾಡಬೇಡಿ’ ಎಂದು ಕೊಹ್ಲಿ ಗರಂ ಆಗಿ ಹೇಳಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments