Select Your Language

Notifications

webdunia
webdunia
webdunia
webdunia

ಭಾರತ-ಆಸ್ಟ್ರೇಲಿಯಾ ಏಕದಿನ: ಟಾಸ್ ಸಂದರ್ಭ ಮಹತ್ವದ ಘೋಷಣೆ ಮಾಡಿದ ವಿರಾಟ್ ಕೊಹ್ಲಿ

ಭಾರತ-ಆಸ್ಟ್ರೇಲಿಯಾ ಏಕದಿನ: ಟಾಸ್ ಸಂದರ್ಭ ಮಹತ್ವದ ಘೋಷಣೆ ಮಾಡಿದ ವಿರಾಟ್ ಕೊಹ್ಲಿ
ರಾಂಚಿ , ಶುಕ್ರವಾರ, 8 ಮಾರ್ಚ್ 2019 (13:10 IST)
ರಾಂಚಿ: ಧೋನಿ ತವರು ರಾಂಚಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಭಾರತ ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಆದರೆ ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ಈ ಪಂದ್ಯವನ್ನು ಭಾರತೀಯ ಸೇನೆಗೆ ಅರ್ಪಿಸುತ್ತೇವೆ ಮತ್ತು ಈ ಪಂದ್ಯದ ಸಂಭಾವನೆಯನ್ನು ಹುತಾತ್ಮ ಯೋಧರಿಗೆ ಅರ್ಪಿಸುತ್ತಿರುವುದಾಗಿ ನಾಯಕ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಪ್ರತಿಯೊಬ್ಬ ಭಾರತೀಯರೂ ಸೇನೆಗೆ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಕಾರಣಕ್ಕಾಗಿಯಾದರೂ ಭಾರತ ಇಂದಿನ ಪಂದ್ಯ ಗೆಲ್ಲಲೇಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾದಲ್ಲಿ ರಿಷಬ್ ಪಂತ್ ಗೆ ಪ್ರಮೋಷನ್, ಶಿಖರ್ ಧವನ್ ಗೆ ಡಿಮೋಷನ್!