ನ್ಯೂಯಾರ್ಕ್: ಇಂದು ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ವಿಶ್ವಕಪ್ ಪಂದ್ಯ ನಡೆಯಲಿದ್ದು, ಇದಕ್ಕೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಜೊತೆ ಕಾಫಿ ಡೇಟ್ ಗೆ ತೆರಳಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನ್ಯೂಯಾರ್ಕ್ ನ ನಾಸೌ ಕೌಂಟಿ ಮೈದಾನದಲ್ಲಿ ಇಂದು ರಾತ್ರಿ 8 ಗಂಟೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ ರೋಚಕ ಪಂದ್ಯ ನಡೆಯಲಿದೆ. ಟಿ20 ವಿಶ್ವಕಪ್ ನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಿ ಅದರ ಮಜವೇ ಬೇರೆ ಲೆವೆಲ್ ನಲ್ಲಿರುತ್ತದೆ. ಅದರಲ್ಲೂ ಪಾಕಿಸ್ತಾನ ವಿರುದ್ಧ ಕೊಹ್ಲಿ ಆಟ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುತ್ತಾರೆ.
ಈ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರು ನೆಟ್ಸ್ ನಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಇದರ ನಡುವೆ ಬಿಡುವು ಮಾಡಿಕೊಂಡು ಕೊಹ್ಲಿ ತಮ್ಮ ಪತ್ನಿ, ಮಗಳೊಂದಿಗೆ ಕಾಫಿ ಡೇಟ್ ಗೆ ತೆರಳಿದ್ದಾರೆ. ಇಬ್ಬರೂ ನ್ಯೂಯಾರ್ಕ್ ಬೀದಿಯಲ್ಲಿ ಕೈ ಕೈ ಹಿಡಿದುಕೊಂಡು ನಡೆದಾಡುವ ಫೋಟೋವೊಂದು ವೈರಲ್ ಆಗಿದೆ.
ಟಿ20 ವಿಶ್ವಕಪ್ ವೇಳೆ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಕ್ಕಳು ಕೂಡಾ ಸಾಥ್ ನೀಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರು ಮೊದಲೇ ನ್ಯೂಯಾರ್ಕ್ ಗೆ ತೆರಳಿದ್ದರೆ ಕೊಹ್ಲಿ ಕೊಂಚ ತಡವಾಗಿ ತಮ್ಮ ಪತ್ನಿ ಮಕ್ಕಳೊಂದಿಗೆ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಿದ್ದರು.