Webdunia - Bharat's app for daily news and videos

Install App

ಮುಂಬೈನಲ್ಲಿ ಬೆಂಗಳೂರು ತಿಂಡಿ ರುಚಿ ಸವಿದ ವಿರಾಟ್ ಕೊಹ್ಲಿ ದಂಪತಿ: ಬಳಿಕ ಮಾಡಿದ್ದೇನು

Krishnaveni K
ಶುಕ್ರವಾರ, 8 ನವೆಂಬರ್ 2024 (14:30 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ದಂಪತಿ ಮುಂಬೈನಲ್ಲಿ ಬೆಂಗಳೂರು ತಿಂಡಿ ರುಚಿ ಸವಿದ ವಿಶೇಷ ಕ್ಷಣವೊಂದರ ಫೋಟೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ.
 
ಎಲ್ಲರಿಗೂ ಗೊತ್ತಿರುವ ಹಾಗೆ ಅನುಷ್ಕಾ ಶರ್ಮಾ ಮೂಲತಃ ಬೆಂಗಳೂರಿನವರು. ವಿರಾಟ್ ಕೊಹ್ಲಿಗೂ ಐಪಿಎಲ್ ದೆಸೆಯಿಂದ ಬೆಂಗಳೂರು ಎರಡನೇ ತವರಿದ್ದಂತೆ. ಇಲ್ಲಿನ ದೋಸೆ ಎಂದರೆ ನನಗೆ ತುಂಬಾ ಇಷ್ಟ ಎಂದು ಕೊಹ್ಲಿ ಅನೇಕ ಬಾರಿ ಹೇಳಿದ್ದಿದೆ.

ಇದೀಗ ಆಸ್ಟ್ರೇಲಿಯಾ ಸರಣಿಗೆ ತೆರಳುವ ಮುನ್ನ ಮುಂಬೈನಲ್ಲೇ ಇರುವ ಕೊಹ್ಲಿ ದಂಪತಿ ಮುಂಬೈನ ರೆಸ್ಟೋರೆಂಟ್ ಒಂದಕ್ಕೆ ತೆರಳಿ ಬೆಂಗಳೂರು ತಿಂಡಿಯ ರುಚಿ ಸವಿದಿದ್ದಾರೆ. ಬಾಂದ್ರಾದ ಕೆಫೆಯೊಂದಕ್ಕೆ ತೆರಳಿ ಬೆಂಗಳೂರಿನ ಆಹಾರ ಅದರಲ್ಲೂ ವಿಶೇಷವಾಗಿ ದೋಸೆ ಸವಿದಿದ್ದಾರೆ. ಬಳಿಕ ಹೋಟೆಲ್ ಸಿಬ್ಬಂದಿಗೆ ತಮ್ಮ ಸಹಿ ಇರುವ ಕ್ಯಾಪ್ ನ್ನು ವಿರಾಟ್ ಕೊಹ್ಲಿ ನೀಡಿದ್ದಾರೆ.

ರುಚಿಯಾದ ತಿಂಡಿ ಸವಿದಿದ್ದು ಮಾತ್ರವಲ್ಲದೆ, ಅಲ್ಲಿನ ಸಿಬ್ಬಂದಿಗಳೊಂದಿಗೆ ಆತ್ಮೀಯವಾಗಿ ಸೆಲ್ಫೀಗೂ ಪೋಸ್ ಕೊಟ್ಟಿದ್ದಾರೆ. ಈ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು ಬೆಂಗಳೂರು ದಿನಗಳು ಮತ್ತೆ ನೆನಪಾಯ್ತು ಮಚ್ಚಾ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಇದಕ್ಕೆ ಡಾ. ರಾಜ್ ಕುಮಾರ್ ಅವರ ಹಾಡನ್ನೂ ಟ್ಯಾಗ್ ಮಾಡಿದ್ದಾರೆ. ಇದನ್ನು ನೋಡಿ ಬೆಂಗಳೂರಿನ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments