Publish Date: Sun, 05 Nov 2023 (09:00 IST)
Updated Date: Sun, 05 Nov 2023 (09:14 IST)
ಕೋಲ್ಕೊತ್ತಾ: ಟೀಂ ಇಂಡಿಯಾ ಕಂಡ ಶ್ರೇಷ್ಠ ಕ್ರಿಕೆಟಿಗರಲ್ಲೊಬ್ಬರಾದ ವಿರಾಟ್ ಕೊಹ್ಲಿಗೆ ಇಂದು ಜನ್ಮದಿನದ ಸಂಭ್ರಮ. ಕೊಹ್ಲಿ ಇಂದು 35 ನೇ ವಸಂತಕ್ಕೆ ಕಾಲಿಡಲಿದ್ದಾರೆ.
ರನ್ ಮೆಷಿನ್ ಎಂದೇ ಪರಿಗಣಿತವಾಗಿರುವ ಕೊಹ್ಲಿ ಜಾಗತಿಕ ಕ್ರಿಕೆಟ್ ನಲ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಲ್ಲದೆ, ಅಪಾರ ಜನರ ಪ್ರೀತಿಯನ್ನೂ ಗಳಿಸಿದ್ದಾರೆ. ಅದಕ್ಕೆ ತಕ್ಕಂತೆ ಇಂದು ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಕೋಲ್ಕೊತ್ತಾ ಈಡನ್ ಗಾರ್ಡನ್ ಮೈದಾನದಲ್ಲಿ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಕೊಹ್ಲಿ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.
ವಿರಾಟ್ ಕೊಹ್ಲಿ ಈ ವಿಶ್ವಕಪ್ ನಲ್ಲಿ ಮೂರು ಬಾರಿ ಶತಕ ತಪ್ಪಿಸಿಕೊಂಡಿದ್ದಾರೆ. ಆದರೆ ಇಂದು ತಮ್ಮ ಜನ್ಮದಿನದಂದು ವಿಶ್ವದಾಖಲೆಯ ಏಕದಿನ ಪಂದ್ಯಗಳ 49 ನೇ ಶತಕ ಸಿಡಿಸಲಿದ್ದಾರೆ ಎಂಬುದು ಅವರ ಅಭಿಮಾನಿಗಳ ನಿರೀಕ್ಷೆ.