Publish Date: Mon, 28 Aug 2023 (09:21 IST)
Updated Date: Mon, 28 Aug 2023 (09:24 IST)
ಬೆಂಗಳೂರು: ಏಷ್ಯಾ ಕಪ್ ಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ ಅಭ್ಯಾಸ ಪಂದ್ಯವಾಡಿದೆ. ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿ ಎದುರಾಳಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಏಷ್ಯಾ ಕಪ್ ಗೆ ಮುನ್ನ ಟೀಂ ಇಂಡಿಯಾ ಆಟಗಾರರು ಜೊತೆಯಾಗಿ ಅಭ್ಯಾಸ ನಡೆಸುತ್ತಿದ್ದಾರೆ. ನಾಯಕ ರೋಹಿತ್ ಶರ್ಮಾ ಸೇರಿದಂತೆ ಏಷ್ಯಾ ಕಪ್ ಗೆ ಆಯ್ಕೆಯಾದ ಎಲ್ಲಾ ಆಟಗಾರರೂ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಇದೀಗ ಅಭ್ಯಾಸದ ನಡುವೆ ಪಂದ್ಯ ನಡೆಸಲಾಗಿದ್ದು, ಕೊಹ್ಲಿ ಶತಕ ಗಳಿಸಿದರೆ, ಶುಬ್ಮನ್ ಗಿಲ್ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದ್ದಾರೆ. ಏಷ್ಯಾ ಕಪ್ ನಲ್ಲಿ ಭಾರತ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ.