Publish Date: Sat, 16 Jun 2018 (11:26 IST)
Updated Date: Sat, 16 Jun 2018 (11:28 IST)
ಬೆಂಗಳೂರು: ಮಹತ್ವದ ಇಂಗ್ಲೆಂಡ್ ಸರಣಿಗೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಯೋ ಯೋ ಫಿಟ್ನೆಸ್ ಟೆಸ್ಟ್ ಮಾಡಲಾಗಿದ್ದು, ನಾಯಕ ವಿರಾಟ್ ಕೊಹ್ಲಿ ಇದರಲ್ಲಿ ಪಾಸಾಗಿದ್ದಾರೆ.
ಬೆಂಗಳೂರಿನ ಎನ್ ಸಿಎಯಲ್ಲಿ ಕ್ರಿಕೆಟಿಗರು ಫಿಟ್ನೆಸ್ ಪರೀಕ್ಷೆಗೊಳಗಾಗಿದ್ದಾರೆ. ಯೋ ಯೋ ಟೆಸ್ಟ್ ನಲ್ಲಿ ಪಾಸಾದವರಿಗೆ ಮಾತ್ರ ಟೀಂ ಇಂಡಿಯಾದಲ್ಲಿ ಅವಕಾಶ ಎಂಬ ನಿಯಮವಿದೆ. ಇದೀಗ ತಾನೇ ಗಾಯದಿಂದ ಚೇತರಿಸಿಕೊಂಡಿರುವ ಕೊಹ್ಲಿ ಜತೆಗೆ ಧೋನಿಯೂ ಫಿಟ್ನೆಸ್ ಪರೀಕ್ಷೆಗೆ ನಿನ್ನೆ ಹಾಜರಾಗಿದ್ದರು.
ಇದೀಗ ಧೋನಿ, ವಿರಾಟ್ ಕೊಹ್ಲಿ, ಭುವನೇಶ್ವರ್ ಕುಮಾರಸ್ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಅದರಂತೆ ಇದೀಗ ಮೊದಲು ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿ ಬಳಿಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಅಂಬುಟಿ ರಾಯುಡು ಫಿಟ್ನೆಸ್ ಟೆಸ್ಟ್ ನಲ್ಲಿ ಫೇಲಾಗಿದ್ದು, ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.