Publish Date: Tue, 17 Dec 2019 (09:33 IST)
Updated Date: Tue, 17 Dec 2019 (09:36 IST)
ದುಬೈ: ಐಸಿಸಿ ಇತ್ತೀಚೆಗಿನ ಟೆಸ್ಟ್ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಬಳಿಕ ಅಗ್ರ ಸ್ಥಾನಕ್ಕೇರಿದ್ದ ಕೊಹ್ಲಿ ಈಗಲೂ ಅದೇ ಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ದ್ವಿತೀಯ ಸ್ಥಾನದಲ್ಲಿದ್ದ ಸ್ಟೀವ್ ಸ್ಮಿತ್ ಅಂಕದಲ್ಲಿ ಕೊಂಚ ಹಿನ್ನಡೆ ಅನುಭವಿಸಿದ್ದಾರೆ. ಆದರೆ ಅವರ ಸ್ಥಾನಕ್ಕೆ ಧಕ್ಕೆಯಾಗಿಲ್ಲ.
ಇನ್ನು ಭಾರತೀಯರ ಪೈಕಿ ಚೇತೇಶ್ವರ ಪೂಜಾರ ನಾಲ್ಕು ಮತ್ತು ಅಜಿಂಕ್ಯಾ ರೆಹಾನೆ ಆರನೇ ಸ್ಥಾನ ಪಡೆದಿದ್ದಾರೆ. ಬೌಲರ್ ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಏಕೈಕ ಭಾರತೀಯರಾಗಿ ಅಗ್ರ 10 ರೊಳಗೆ ಸ್ಥಾನ ಪಡೆದಿದ್ದಾರೆ. ಆಲ್ ರೌಂಡರ್ ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಎರಡನೇ ಸ್ಥಾನದಲ್ಲಿದ್ದಾರೆ.