Publish Date: Thu, 12 Jul 2018 (16:40 IST)
Updated Date: Thu, 12 Jul 2018 (16:42 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಭಾರತೀಯ ಕಾಲಮಾನ ಪ್ರಕಾರ 5 ಗಂಟೆಗೆ ಪಂದ್ಯ ಆರಂಭವಾಗುತ್ತಿದೆ. ಇದೊಂದು ಹಾರ್ಡ್ ವಿಕೆಟ್ ನಂತೆ ತೋರುತ್ತಿದೆ. ನಾವು ಹಿಂದೆಯೂ ಹಲವು ಬಾರಿ ಚೆನ್ನಾಗಿ ಚೇಸಿಂಗ್ ಮಾಡಿದ್ದೇವೆ. ಅದಕ್ಕೆ ಮೊದಲು ಫೀಲ್ಡಿಂಗ್ ಆಯ್ದುಕೊಳ್ಳುತ್ತೇವೆ ಎಂದು ಟಾಸ್ ಸಂದರ್ಭದಲ್ಲಿ ಕೊಹ್ಲಿ ಹೇಳಿಕೊಂಡಿದ್ದಾರೆ.
ನಿರೀಕ್ಷೆಯಂತೇ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಭುವನೇಶ್ವರ್ ಕುಮಾರ್ ಸ್ಥಾನದಲ್ಲಿ ಯುವ ವೇಗಿ ಸಿದ್ಧಾರ್ಥ್ ಕೌಲ್ ಗೆ ಸ್ಥಾನ ನೀಡಿರುವುದು ಅಚ್ಚರಿ ಮೂಡಿಸಿದೆ. ಉಳಿದಂತೆ ಟಿ20 ಪಂದ್ಯದಲ್ಲಿ ಆಡಿದ ತಂಡವನ್ನೇ ಕೊಹ್ಲಿ ಉಳಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.