Publish Date: Tue, 07 Sep 2021 (09:24 IST)
Updated Date: Tue, 07 Sep 2021 (09:27 IST)
ಲಂಡನ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ಗೆದ್ದು ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಕಪಿಲ್ ದೇವ್ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.
ಇಂಗ್ಲೆಂಡ್ ನ್ನು 157 ರನ್ ಗಳಿಂದ ಮಣಿಸಿದ ಟೀಂ ಇಂಡಿಯಾ 1986 ರ ಬಳಿಕ ಇಂಗ್ಲೆಂಡ್ ನಲ್ಲಿ ಒಂದೇ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಗೆಲುವು ಸಾಧಿಸಿದ ಸಾಧನೆ ಮಾಡಿದೆ. ಆಗ ಕಪಿಲ್ ದೇವ್ ನಾಯಕತ್ವದಲ್ಲಿ ತಂಡ ಎರಡು ಗೆಲುವು ಸಾಧಿಸಿತ್ತು. ಈಗ ಕೊಹ್ಲಿ ಕಪಿಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಅಲ್ಲದೆ ಒಂದೇ ಸರಣಿಯಲ್ಲಿ ಓವಲ್ ಮತ್ತು ಲಾರ್ಡ್ಸ್ ಮೈದಾನದಲ್ಲಿ ಭಾರತ ಗೆಲುವು ಕಂಡಿದ್ದು ಇದೇ ಮೊದಲು. ಇದಕ್ಕೂ ಮೊದಲು ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್ ಮತ್ತು ದ.ಆಫ್ರಿಕಾ ಈ ದಾಖಲೆ ಮಾಡಿದೆ.