Daily Horoscope

Select Your Language

Notifications

webdunia
webdunia
webdunia
webdunia

ಐಪಿಎಲ್ 2024: ರೆಕಾರ್ಡ್ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ

Virat Kohli
ಮುಂಬೈ: ಐಪಿಎಲ್ 2024 ರ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯಲಿರುವ ಆರ್ ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಮಹತ್ವದ ದಾಖಲೆಯೊಂದನ್ನು ಮಾಡಲಿದ್ದಾರೆ.

ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ಕೊಹ್ಲಿ 1 ಶತಕವೂ ಸೇರಿದಂತೆ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದಾರೆ. ಇದೇ ಸೀಸನ್ ನಲ್ಲಿ ಗರಿಷ್ಠ ರನ್ ಗಳಿಸಿ ಆರೆಂಜ್ ಕ್ಯಾಪ್ ಗೌರವಕ್ಕೂ ಪಾತ್ರರಾಗಿದ್ದಾರೆ. ಇದೀಗ ಕೊಹ್ಲಿ ಇಂದಿನ ಪಂದ್ಯದಲ್ಲಿ ಮಹತ್ವದ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದಾರೆ.

ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ನಾಲ್ಕು ಸಿಕ್ಸರ್ ಸಿಡಿಸಿದರೆ ಐಪಿಎಲ್ ನಲ್ಲಿ 250 ಸಿಕ್ಸರ್ ಸಿಡಿಸಿದ ನಾಲ್ಕನೇ ಆಟಗಾರ ಎಂಬ ದಾಖಲೆ ಮಾಡಲಿದ್ದಾರೆ. ಐಪಿಎಲ್ ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ದಾಖಲೆ ವೆಸ್ಟ್ ಇಂಡೀಸ್ ಮೂಲದ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಅವರು 357 ಸಿಕ್ಸರ್ ಸಿಡಿಸಿದ್ದರು.

ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ 264 ಸಿಕ್ಸರ್ ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಕೊಹ್ಲಿ ನಾಲ್ಕು ಸಿಕ್ಸರ್ ಸಿಡಿಸಿದರೆ ರೋಹಿತ್ ನಂತರ ಈ ದಾಖಲೆ ಪಟ್ಟಿಯಲ್ಲಿ ಸ್ಥಾನ ಪಡೆದ ಮತ್ತೊಬ್ಬ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಹೋದರನಿಂದಲೇ ಹಾರ್ದಿಕ್ ಪಾಂಡ್ಯಗೆ ಕೋಟ್ಯಾಂತರ ಹಣ ದೋಖಾ