Publish Date: Fri, 08 Jun 2018 (09:02 IST)
Updated Date: Fri, 08 Jun 2018 (09:04 IST)
ಮುಂಬೈ: ಬಿಸಿಸಿಐ ತನ್ನ ವಾರ್ಷಿಕ ಪ್ರಶಸ್ತಿ ಘೋಷಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಷ್ಠಿತ ಪಾಲಿ ಉಮ್ರಿಗರ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜೂನ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಹ್ಲಿ ಹಾಗೂ ಇತರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
2016-17 ಮತ್ತು 2017-18 ನೇ ಸಾಲಿನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಕ್ಕೆ ಕೊಹ್ಲಿಗೆ ಈ ಪ್ರಶಸ್ತಿ ಸಂದಿದೆ. 2017-18 ನೇ ಋತುವಿನಲ್ಲಿ ಕೊಹ್ಲಿ 101 ಸರಾಸರಿಯಲ್ಲಿ ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ 89.6 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಮಹಿಳಾ ವಿಭಾಗದಲ್ಲಿ ಹರ್ಮನ್ ಪ್ರೀತ್ ಕೌರ್ ಮತ್ತು ಸ್ಮೃತಿ ಮಂದನಾ ಶ್ರೇಷ್ಠ ಮಹಿಳಾ ಕ್ರಿಕೆಟಿಗರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.