ನೀವು ನನ್ನ ಹೀರೋ: ಕೋಚ್ ದ್ರಾವಿಡ್ ಗೆ ಕೊಹ್ಲಿ ಭಾವುಕ ಮಾತು

Webdunia
ಶುಕ್ರವಾರ, 4 ಮಾರ್ಚ್ 2022 (09:20 IST)
Photo Courtesy: Twitter
ಮೊಹಾಲಿ: 100 ನೇ ಟೆಸ್ಟ್ ಪಂದ್ಯವಾಡುತ್ತಿರುವ ವಿರಾಟ್ ಕೊಹ್ಲಿಗೆ ಇಂದಿನ ಪಂದ್ಯಕ್ಕೆ ಮೊದಲು ಕೋಚ್ ರಾಹುಲ್ ದ್ರಾವಿಡ್ ಕೈಯಿಂದ ಬಿಸಿಸಿಐ ವಿಶೇಷ ಸನ್ಮಾನ ಏರ್ಪಡಿಸಿತ್ತು.

ಮೊಹಾಲಿ ಅಂಗಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇಡೀ ಟೀಂ ಇಂಡಿಯಾ ಕ್ರಿಕೆಟಿಗರು ಮತ್ತು ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಉಪಸ್ಥಿತಿಯಲ್ಲಿ ಕೊಹ್ಲಿಗೆ ಕೋಚ್ ರಾಹುಲ್ ದ್ರಾವಿಡ್ ಕೈಯಿಂದ ವಿಶೇಷ ಕ್ಯಾಪ್ ಗೌರವ ಪೂರ್ವಕವಾಗಿ ನೀಡಿ ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಕೊಹ್ಲಿ, ‘ಇದು ನನ್ನ ವಿಶೇಷ ಕ್ಷಣ. ನನ್ನ ಪತ್ನಿ, ಸಹೋದರ, ಕೋಚ್ ಮತ್ತು ಇಡೀ ಕುಟುಂಬವೇ ಇಲ್ಲಿದ್ದಾರೆ. ಎಲ್ಲರಿಗೂ ಇದು ಹೆಮ್ಮೆಯ ಕ್ಷಣ. ಇದು ತಂಡವಾಗಿ ಆಡಿದ್ದಕ್ಕೆ ಸಿಕ್ಕ ಪ್ರತಿಫಲ. ಇದಕ್ಕೆ ಬಿಸಿಸಿಐಗೆ ಧನ್ಯವಾದ ಸಲ್ಲಿಸಬೇಕು. ರಾಹುಲ್ ಭಾಯ್, ನೀವು ನನ್ನ ಬಾಲ್ಯದ ಹೀರೋ. ನಿಮ್ಮ ಜೊತೆ ಅಂಡರ್ 19 ಕ್ರಿಕೆಟ್ ವೇಳೆ ತೆಗೆಸಿಕೊಂಡ ಫೋಟೋ ಈಗಲೂ ನನ್ನ ಬಳಿಯಿದೆ. ನಿಮ್ಮ ಕೈಯಿಂದಲೇ ಈವತ್ತು ಈ ಗೌರವ ಸಿಕ್ಕಿದ್ದು ನನ್ನ ಪಾಲಿಗೆ ವಿಶೇಷ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments