ಶ್ರೀಲಂಕಾ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ ಹಿನ್ನೆಲೆಯಲ್ಲಿ ಭಾರತ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದೆ.
ಭಾರತ ಟೆಸ್ಟ್ ಕ್ರಿಕೆಟ್ ತಂಡ 112 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ 111 ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತ ಅಗ್ರಪಟ್ಟದಲ್ಲಿ ಮುಂದುವರಿಯಬೇಕಾದಲ್ಲಿ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಜಯಗಳಿಸುವ ಅನಿವಾರ್ಯತೆ ಎದುರಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 2-0 ದಿಂದ ಮುನ್ನಡೆ ಸಾಧಿಸಿದೆ.
ಸ್ಟೀವ್ ಸ್ಮಿತ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನಕ್ಕೆ ಕುಸಿದರೆ ಇಂಗ್ಲೆಂಡ್ ತಂಡ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ