Publish Date: Wed, 03 Nov 2021 (19:29 IST)
Updated Date: Wed, 03 Nov 2021 (19:30 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ ಮತ್ತು ಆಫ್ಘಾನಿಸ್ತಾನ ಮುಖಾಮುಖಿಯಾಗುತ್ತಿದ್ದು, ಸತತ ಮೂರನೇ ಬಾರಿಗೆ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ.
ಇದರಿಂದಾಗಿ ಭಾರತ ಮೊದಲು ಬ್ಯಾಟಿಂಗ್ ನಡೆಸುತ್ತಿದೆ. ಕಳೆದ ಎರಡು ಪಂದ್ಯಗಳನ್ನು ಸೋತಿರುವ ಟೀಂ ಇಂಡಿಯಾಗೆ ಮುಂದಿನ ಎಲ್ಲಾ ಪಂದ್ಯಗಳನ್ನೂ ಭಾರೀ ಅಂತರದಿಂದ ಗೆಲ್ಲುವ ಅನಿವಾರ್ಯತೆಯಿದೆ.
ಇಂದಿನ ಪಂದ್ಯದಲ್ಲಿ ವರುಣ್ ಚಕ್ರವರ್ತಿ ಸ್ಥಾನಕ್ಕೆ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತು ಇಶಾನ್ ಕಿಶನ್ ಬದಲಿಗೆ ಸೂರ್ಯಕುಮಾರ್ ಯಾದವ್ ಗೆ ಅವಕಾಶ ನೀಡಿದೆ.