Publish Date: Mon, 24 Jun 2019 (09:48 IST)
Updated Date: Mon, 24 Jun 2019 (09:52 IST)
ಮುಂಬೈ: ವಿಶ್ವಕಪ್ ಬಳಿಕ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಏಕದಿನ ಸರಣಿಗೆ ನಾಯಕ ವಿರಾಟ್ ಕೊಹ್ಲಿ ಮತ್ತು ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ಆಗಸ್ಟ್ 3 ರಿಂದ ಏಕದಿನ ಸರಣಿ ನಡೆಯಲಿದ್ದು, ಸತತ ಕ್ರಿಕೆಟ್ ನಿಂದ ಬಳಲಿರುವ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ. ಆದರೆ ಬಳಿಕ ನಡೆಯಲಿರುವ ಟೆಸ್ಟ್ ಸರಣಿಗೆ ಉಭಯ ಆಟಗಾರರು ಮರಳುವ ಸಾಧ್ಯತೆಯಿದೆ.
ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸುವ ಸಾಧ್ಯತೆಯಿದೆ. ಈ ಹಿಂದೆಯೂ ಕೊಹ್ಲಿ ಇಲ್ಲದೇ ಇದ್ದಾಗ ರೋಹಿತ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು.