ಮುಂಬೈ: ವಿಶ್ವದ ಶ್ರೀಮಂತ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಆಸ್ತಿ ಮೌಲ್ಯ ಒಟ್ಟು 1000 ಕೋಟಿ ರೂ.ಗೆ ತಲುಪಿದೆ.
ಸ್ಟಾಕ್ ಗ್ರೋ ವರದಿ ಪ್ರಕಾರ ವಿರಾಟ್ ಕೊಹ್ಲಿ ಒಟ್ಟು ಆಸ್ತಿ ಮೌಲ್ಯ ಈಗ 1050 ಕೋಟಿ ರೂ. ತಲುಪಿದೆ. ಇದರೊಂದಿಗೆ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗರ ಪೈಕಿ ಅತ್ಯಂತ ಶ್ರೀಮಂತ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬಿಸಿಸಿಐನ ಎ ಪ್ಲಸ್ ದರ್ಜೆಯ ಗುತ್ತಿಗೆ ಪಡೆದಿರುವ ಕೊಹ್ಲಿ ವಾರ್ಷಿಕ 7 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ. ಪ್ರತೀ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ., ಏಕದಿನ ಪಂದ್ಯಕ್ಕೆ 6 ಲಕ್ಷ ರೂ. ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ. ವೇತನ ಪಡೆಯುತ್ತಾರೆ. ಆರ್ ಸಿಬಿ ಪರ ಐಪಿಎಲ್ ಆಡುವ ಕೊಹ್ಲಿ ಇದಕ್ಕೆ 15 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ.
ಬ್ಯುಸಿನೆಸ್ ಗೂ ಕೈ ಹಾಕಿರುವ ಕೊಹ್ಲಿ ಹಲವು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅದಲ್ಲದೆ ಬ್ರಾಂಡ್ ಅಂಬಾಸಿಡರ್ ಆಗಿ ವಾರ್ಷಿಕ ಸುಮಾರು 175 ಕೋಟಿ ರೂ. ಗಳಿಕೆ ಮಾಡುತ್ತಿದ್ದಾರೆ. ಅದಲ್ಲದೆ, ಸೋಷಿಯಲ್ ಮೀಡಿಯಾ ಪೋಸ್ಟ್ ಗಳಿಂದಲೂ ಆದಾಯ ಗಳಿಸುತ್ತಿದ್ದಾರೆ. ಇದರಿಂದಾಗಿಯೇ ಅವರ ಆಸ್ತಿ ಸಾವಿರ ಕೋಟಿಯ ಗಡಿ ತಲುಪಿದೆ.