Publish Date: Mon, 06 Aug 2018 (09:30 IST)
Updated Date: Mon, 06 Aug 2018 (09:32 IST)
ಎಡ್ಜ್ ಬಾಸ್ಟನ್: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನು ಆಘಾತಕಾರಿಯಾಗಿ ಸೋತರೂ ನಾಯಕ ವಿರಾಟ್ ಕೊಹ್ಲಿ ವೈಯಕ್ತಿಕ ಸಾಧನೆಗೆ ಕೊರತೆಯಾಗಿಲ್ಲ.
ಮೊದಲ ಇನಿಂಗ್ಸ್ ನಲ್ಲಿ ಶತಕ ಹಾಗೂ ದ್ವಿತೀಯ ಇನಿಂಗ್ಸ್ ನಲ್ಲೂ ಅತ್ಯುತ್ತಮ ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ ಇದೀಗ ಟೆಸ್ಟ್ ಕ್ರಿಕೆಟ್ ರ್ಯಾಂಕಿಂಗ್ ನಲ್ಲಿ ನಂ.1 ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ.
ಇದುವರೆಗೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ನಂ.1 ಸ್ಥಾನದಲ್ಲಿದ್ದರು. ಇದೀಗ ಕೊಹ್ಲಿ ಸ್ಮಿತ್ ಗಿಂತ ಐದು ಅಂಕ ಹೆಚ್ಚು ಪಡೆದಿದ್ದು ನಂ.1 ಆಗಿದ್ದಾರೆ. ಸರಣಿಯ ಮುಂದಿನ ಎಲ್ಲಾ ಪಂದ್ಯಗಳಲ್ಲೂ ಇದೇ ರೀತಿಯ ಪ್ರದರ್ಶನ ಕಾಯ್ದುಕೊಂಡರೆ ಕೊಹ್ಲಿ ನಂ.1 ಸ್ಥಾನದಲ್ಲಿಯೇ ಉಳಿದುಕೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.