Select Your Language

Notifications

webdunia
webdunia
webdunia
webdunia

ಇದೀಗ ಕನ್ ಫರ್ಮ್: ಇಂಗ್ಲೆಂಡ್ ವಿರುದ್ಧ ಮುಂದಿನ ಟೆಸ್ಟ್ ಪಂದ್ಯಗಳಲ್ಲಿ ಆಡಲ್ಲ ವಿರಾಟ್ ಕೊಹ್ಲಿ

Virat Kohli

Krishnaveni K

ಮುಂಬೈ , ಶನಿವಾರ, 10 ಫೆಬ್ರವರಿ 2024 (10:03 IST)
ಮುಂಬೈ: ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಲಭ್ಯತೆ ಬಗ್ಗೆ ಇದುವರೆಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ.

ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣ ನೀಡಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಮುಂದಿನ ಮೂರು ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಅದಕ್ಕೆ ಮೊದಲು ಕೊಹ್ಲಿ ಆಡುತ್ತಾರೋ ಇಲ್ಲವೋ ಎಂಬ ಗೊಂದಲಗಳಿತ್ತು. ಆದರೆ ಈಗ ಕೊಹ್ಲಿ ಮುಂದಿನ ಎಲ್ಲಾ ಮೂರೂ ಪಂದ್ಯಗಳಿಂದಲೂ ಹೊರಗುಳಿಯುವ ನಿರ್ಧಾರ ಪ್ರಕಟಿಸಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

ರಜೆ ವಿಸ್ತರಿಸಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ತಮ್ಮ ರಜೆಯನ್ನು ವಿಸ್ತರಿಸಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಬಿಸಿಸಿಐ ಮತ್ತು ಟೀಂ ಮ್ಯಾನೇಜ್ ಮೆಂಟ್ ಅವರ ನಿರ್ಧಾರವನ್ನು ಗೌರವಿಸುತ್ತದೆ’ ಎಂದಿದೆ. ಹೀಗಾಗಿ ಕೊಹ್ಲಿ ಕೊನೆಯ ಮೂರು ಪಂದ್ಯಗಳಿಗೆ ಇಲ್ಲ ಎನ್ನುವುದು ಖಚಿತವಾಗಿದೆ.

ಈಗಾಗಲೇ ಶ್ರೇಯಸ್ ಅಯ್ಯರ್ ಗಾಯದಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಕೆಎಲ್ ರಾಹುಲ್, ಜಡೇಜಾ ತಂಡಕ್ಕೆ ವಾಪಸ್ ಬರುವುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಾಗಿ ಕೊಹ್ಲಿ ಕೂಡಾ ತಂಡದಲ್ಲಿ ಇರದೇ ಇರುವುದು ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ. ಇಂದು ಮತ್ತು ನಾಳೆಯಾಗಿ ಮುಂದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಆಯ್ಕೆಗೆ ಮುನ್ನ ಮುಂಬೈನಲ್ಲಿ ಪ್ರತ್ಯಕ್ಷರಾದ ಕೆಎಲ್ ರಾಹುಲ್