Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ನನ್ನ ಫೇವರೇಟ್ ನಾಯಕರಲ್ಲಿ ಒಬ್ಬರು: ಸೌರವ್ ಗಂಗೂಲಿ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (14:16 IST)
ನಾನು ಮೆಚ್ಚಿದ ಭಾರತೀಯ ಕ್ರಿಕೆಟ್ ತಂಡದ ನಾಯಕರಲ್ಲಿ ಟೆಸ್ಟ್ ತಂಡ ನಾಯಕ ವಿರಾಟ್ ಕೊಹ್ಲಿ ಕೂಡಾ ಒಬ್ಬರು ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೊಗಳಿದ್ದಾರೆ. 
 
ಕಳೆದ 10 ವರ್ಷಗಳಿಂದ ಸ್ಟೀಲ್ ಬ್ರಾಂಡ್‌ ಜಾಹೀರಾತಿನೊಂದಿಗಿರುವ ಬಾಂಧವ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವಿರಾಟ್ ನನ್ನ ಅತ್ಯಂತ ಫೇವರೇಟ್ ನಾಯಕರಲ್ಲಿ ಒಬ್ಬರು ಎಂದು ತಿಳಿಸಿದ್ದಾರೆ.
 
 ಕೊಹ್ಲಿ ಅತಿ ಕಡಿಮೆ ಅವಧಿಯಲ್ಲಿಯೇ ಅತ್ಯುತ್ತಮ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕೊಹ್ಲಿಯಲ್ಲಿ ಹೋರಾಡುವ ಮನೋಭಾವವಿದೆ, ಗೆಲ್ಲುವ ಛಲವಿದೆ. ದೇಶಕ್ಕೆ, ಕ್ರಿಕೆಟ್ ಕ್ಷೇತ್ರಕ್ಕೆ ಕೊಹ್ಲಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕರಾದ ನಂತರ ಇಲ್ಲಿಯವರೆಗೆ 7 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದಾರೆ. ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಕೆರೆಬಿಯನ್‌ನಲ್ಲಿ ಟೆಸ್ಟ್ ಪಂದ್ಯದಲ್ಲಿ ಜಯಗಳಿಸಿದ್ದಾರೆ. ಒಂದೇ ಸರಣಿಯಲ್ಲಿ ಎರಡು ಬಾರಿ ಶತಕ ದಾಖಲಿಸಿರುವುದು ಸಂತಸದ ಸಂಗತಿ ಎಂದರು.
 
ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ ಮೂರು ಟೆಸ್ಟ್ ಪಂದ್ಯ ಮತ್ತು ಐದು ಏಕದಿನ ಪಂದ್ಯಗಳನ್ನಾಡಲಿದೆ. ಗುರುವಾರದಂದು ಕಾನ್ಪುರದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments