ಟೆಸ್ಟ್ ನಿವೃತ್ತಿ ಬಗ್ಗೆ ಕೊನೆಗೂ ಓಪನ್ ಆಗಿ ಮಾತನಾಡಿದ ವಿರಾಟ್ ಕೊಹ್ಲಿ

Krishnaveni K
ಬುಧವಾರ, 9 ಜುಲೈ 2025 (11:08 IST)
ಮುಂಬೈ: ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಈಗ ನಿವೃತ್ತಿ ಘೋಷಿಸಲು ಕಾರಣವೇನೆಂದು ಮುಕ್ತವಾಗಿ ಮಾತನಾಡಿದ್ದಾರೆ.

ಲಂಡನ್ ನಲ್ಲಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಮ್ಮ ಫೌಂಡೇಷನ್ ಗಾಗಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ ನಿವೃತ್ತಿಗೆ ಕಾರಣವೇನೆಂದು ಮಾತನಾಡಿದ್ದಾರೆ. ಈ ವೇದಿಕೆಯಲ್ಲಿ ರವಿಶಾಸ್ತ್ರಿ, ಕೆವಿನ್ ಪೀಟರ್ಸನ್ ಸೇರಿದಂತೆ ದಿಗ್ಗಜರು ಇದ್ದರು.

ಈ ವೇಳೆ ಮಾತನಾಡಿದ ಕೊಹ್ಲಿ ‘ನಾನು ಎರಡು ದಿನಗಳ ಹಿಂದಷ್ಟೇ ನನ್ನ ಗಡ್ಡಕ್ಕೆ ಕಲರಿಂಗ್ ಮಾಡಿದೆ. ಈಗ ನಾಲ್ಕು ದಿನಕ್ಕೊಮ್ಮೆ ಗಡ್ಡಕ್ಕೆ ಕಲರ್ ಮಾಡುವ ವಯಸ್ಸು ನನಗಾಗಿದೆ’ ಎಂದು ತಮಾಷೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ‘ಈ ಮಾದರಿ ಕ್ರಿಕೆಟ್ ನಿಂದ ನಿವೃತ್ತಿಯಾಗುವುದು ನನಗೆ ಸುಲಭವಾಗಿರಲಿಲ್ಲ. ಈ ಮಾದರಿಗೆ ನಾನು ಸಾಕಷ್ಟು ನೀಡಿದ್ದೇನೆ. ಅದೇ ರೀತಿ ಟೆಸ್ಟ್ ಕ್ರಿಕೆಟ್ ಕೂಡಾ ನಾನು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನೀಡಿದೆ. ನನ್ನ ಟೆಸ್ಟ್ ವೃತ್ತಿ ಜೀವನದ ಕಡೆಗೊಮ್ಮೆ ಹಿಂತಿರುಗಿ ನೋಡಿದರೆ ನನಗೆ ಹೆಮ್ಮೆಯಾಗುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments