ಟಿ20 ವಿಶ್ವಕಪ್ ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆರಂಭಿಕರು: ಹಾರ್ದಿಕ್ ಪಾಂಡ್ಯಗೆ ನೋ ಎಂಟ್ರಿ

Krishnaveni K
ಬುಧವಾರ, 17 ಏಪ್ರಿಲ್ 2024 (14:57 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಹಾರ್ದಿಕ್ ಪಾಂಡ್ಯಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ.

ಇತ್ತೀಚೆಗಷ್ಟೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ನೇತೃತ್ವದಲ್ಲಿ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ನಡುವೆ ಮುಂಬರುವ ಟಿ20 ವಿಶ್ವಕಪ್ ತಂಡದ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ.  ಈ ವೇಳೆ ವಿರಾಟ್ ಕೊಹ್ಲಿ ಸ್ಥಾನದ ಬಗ್ಗೆ ಚರ್ಚಿಸಲಾಗಿದೆ ಎಂಬ ಮಾಹಿತಿಯಿದೆ.

ರೋಹಿತ್ ಶರ್ಮಾ ಟೀಂ ಇಂಡಿಯಾದ ಖಾಯಂ ಆರಂಭಿಕ. ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಆರಂಭಿಕರಾಗಿ ಆಡಿದ ಅನುಭವವಿದೆ. ಮಾತ್ರವಲ್ಲ, ಟಿ20 ಕ್ರಿಕೆಟ್ ನಲ್ಲಿ ಅವರು ಆರಂಭಿಕರಾಗಿ ಯಶಸ್ಸು ಗಳಿಸಿದ್ದಾರೆ ಕೂಡಾ. ಹೀಗಾಗಿ ಟಿ20 ವಿಶ್ವಕಪ್ ನಲ್ಲೂ ಅವರನ್ನು ಆರಂಭಿಕರಾಗಿಯೇ ಕಣಕ್ಕಿಳಿಸಲು ತೀರ್ಮಾನ ಮಾಡಲಾಗಿದೆ ಎಂಬ ಸುದ್ದಿಯಿದೆ.

ಇದೇ ವೇಳೆ ಆಲ್ ರೌಂಡರ್ ಹಾರ್ದಿಕ್‍ ಪಾಂಡ್ಯಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ. ಹಾರ್ದಿಕ್ ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ಅವರು ಈಗಲೂ ಸಂಪೂರ್ಣವಾಗಿ ಬೌಲಿಂಗ್ ಮಾಡುತ್ತಿಲ್ಲ. ತಂಡಕ್ಕೆ ಕೇವಲ ಬ್ಯಾಟಿಗನಾಗಿ ಹಾರ್ದಿಕ್ ಅಗತ್ಯವಿಲ್ಲ. ಹೀಗಾಗಿ ಅವರ ಬದಲು ಟಿ20 ಮಾದರಿಯಲ್ಲಿ ಇತ್ತೀಚೆಗೆ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಯುವ ಆಲ್ ರೌಂಡರ್ ಶಿವಂ ದುಬೆ ಅವರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ.

ಇತ್ತ ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್ ಕೂಡಾ ಬ್ಯಾಕಪ್ ಓಪನರ್ ಗಳಾಗಿ ತಂಡಕ್ಕೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಇದೀಗ ಐಪಿಎಲ್ ನಲ್ಲಿ ನಾಯಕತ್ವ ಮತ್ತು ಬ್ಯಾಟಿಂಗ್ ಮೂಲಕ ಮಿಂಚುತ್ತಿರುವ ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಗಬಹುದಾಗಿದೆ. ಆದರೆ ಇಶಾನ್ ಕಿಶನ್ ಗೆ ಅವಕಾಶ ಸಿಗುವುದು ಅನುಮಾನ. ಮತ್ತೊಬ್ಬ ವಿಕೆಟ್ ಕೀಪರ್ ಆಗಿ ರಿಷಬ್ ಪಂತ್ ಕಮ್ ಬ್ಯಾಕ್ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments