Daily Horoscope

Select Your Language

Notifications

webdunia
webdunia
webdunia
webdunia

ಐದು ವರ್ಷಗಳ ಬಳಿಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ವಿರಾಟ್‌ ಕೊಹ್ಲಿ: ರೋಹಿತ್‌ ಶರ್ಮಾಗೆ ಶಾಕ್‌

Star batter Virat Kohli, former captain Rohit Sharma, International Cricket Council
Photo Credit X
ಮುಂಬೈ: ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ ಅವರನ್ನು ಹಿಂದಿಕ್ಕಿ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ರನ್‌ ಮಿಷಿನ್‌ ಖ್ಯಾತಿಯ ವಿರಾಟ್‌ ಅವರು 1,403 ದಿನಗಳ ಬಳಿಕ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಅಗ್ರಸ್ಥಾನದಲ್ಲಿದ್ದ ರೋಹಿತ್‌ ಶರ್ಮಾ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿರುವ ರನ್‌ ಮಿಷಿನ್‌ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ. 

ವಿರಾಟ್‌ ಅವರು 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್‌ ಆಗಿ ಹೊರಹೊಮ್ಮಿದ್ದಾರೆ. ಬುಧವಾರ ಬಿಡುಗಡೆಯಾದ ನೂತನ ಏಕದಿನ ರ‍್ಯಾಂಕಿಗ್‌ ಪಟ್ಟಿಯಲ್ಲಿ 785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೆ ಜಿಗಿದಿದ್ದಾರೆ. ನ್ಯೂಜಿಲೆಂಡ್‌ನ ಡೇರಿಲ್‌ ಮಿಚೆಲ್‌ ಎರಡನೇ ಸ್ಥಾನದಲ್ಲಿದ್ದಾರೆ. 

2013ರಲ್ಲಿ ಮೊಟ್ಟ ಮೊದಲ ಬಾರಿಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದ ಕೊಹ್ಲಿ, 2018ರಲ್ಲಿ ಇಂಗ್ಲೆಂಡ್‌ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಮತ್ತೆ ಅಗ್ರಸ್ಥಾನಕ್ಕೆ ಜಿಗಿದಿದ್ದರು. ಆ ಬಳಿಕ ಟಾಪ್‌ 11 ರಲ್ಲಿ ಹಲವು ಸ್ಥಾನಗಳಲ್ಲಿದ್ದ ಕೊಹ್ಲಿ 5 ವರ್ಷಗಳ ಬಳಿಕ ನಂ.1 ಪಟ್ಟಕ್ಕೇರಿದ್ದಾರೆ.

ಉತ್ತಮ ಲಯದಲ್ಲಿರುವ ವಿರಾಟ್‌ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 2 ಶತಕ, 1 ಅರ್ಧಶತಕ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಕಿವೀಸ್‌ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 91 ಎಸೆತಗಳಲ್ಲಿ 93 ರನ್‌ ಗಳಿಸಿದ್ದರು. ಈ ಮೂಲಕ 785 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ.  

ಏಕದಿನ ಬ್ಯಾಟಿಂಗ್‌ ರ‍್ಯಾಂಕಿಂಗ್‌ನ ಅಗ್ರ 10ರಲ್ಲಿ ನಾಲ್ಕು ಮಂದಿ ಸ್ಥಾನ ಪಡೆದಿದ್ದಾರೆ. ಭಾರತ ತಂಡದ ನಾಯಕ ಶುಭಮನ್‌ ಗಿಲ್‌ ಐದನೇ ಸ್ಥಾನ, ಶ್ರೇಯಸ್‌ ಅಯ್ಯರ್‌ 10ನೇ ಸ್ಥಾನದಲ್ಲಿದ್ದಾರೆ. ಕನ್ನಡಿಗ ಕೆ.ಎಲ್‌.ರಾಹುಲ್‌ 11ನೇ ಸ್ಥಾನ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

IND vs NZ: ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಟೀಂ ಇಂಡಿಯಾಗೆ ಕಾಡುತ್ತಿದೆ ಈ ಬೌಲರ್ ನ ಕೊರತೆ