Publish Date: Thu, 25 Aug 2022 (10:48 IST)
Updated Date: Thu, 25 Aug 2022 (10:50 IST)
ದುಬೈ: ಏಷ್ಯಾ ಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಯುಎಇಗೆ ಬಂದಿಳಿದಿರುವ ಟೀಂ ಇಂಡಿಯಾ ಈಗ ಅಭ್ಯಾಸ ನಡೆಸುತ್ತಿದೆ. ಭಾನುವಾರ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಈ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಕಠಿಣ ಅಭ್ಯಾಸ ನಡೆಸುತ್ತಿದ್ದು ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ ಗೆ ಮರಳುವುದು ಮುಖ್ಯವಾಗಿದೆ.
ಅಭ್ಯಾಸದ ವೇಳೆ ಯಜುವೇಂದ್ರ ಚಾಹಲ್ ಬೌಲಿಂಗ್ ನಲ್ಲಿ ಕೊಹ್ಲಿ ಬೌಂಡರಿ, ಸಿಕ್ಸರ್ ಗಳ ಸುರಿಮಳೆ ಸುರಿಸಿದ್ದು, ಏಷ್ಯಾ ಕಪ್ ನಲ್ಲಿ ಕಮ್ ಬ್ಯಾಕ್ ಮಾಡಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದಾರೆ. ಕೊಹ್ಲಿ ನೆಟ್ಸ್ ನಲ್ಲಿ ಬ್ಯಾಟಿಂಗ್ ಮಾಡುವ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.