ಲಂಡನ್: ಇಂಗ್ಲೆಂಡ್ ವಿರುದ್ಧ ಜುಲೈ 1 ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ನಾಯಕರಾಗಲ್ಲ ಎಂದು ಅವರ ಬಾಲ್ಯದ ಕೊಚ್ ರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ.
ರೋಹಿತ್ ಶರ್ಮಾಗೆ ಕೊವಿಡ್ ಪೊಸಿಟಿವ್ ಆಗಿರುವುದರಿಂದ ಅವರು ಟೆಸ್ಟ್ ಪಂದ್ಯಕ್ಕೆ ಲಭ್ಯರಾಗುವುದು ಅನುಮಾನ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಅನುಭವಿ ಕೊಹ್ಲಿ ತಂಡವನ್ನು ಮುನ್ನಡೆಸಬಹುದು ಎಂಬ ಊಹಾಪೋಹಗಳಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ ಕುಮಾರ್ ಕೊಹ್ಲಿಯನ್ನು ನಾಯಕತ್ವದಿಂದ ಪದಚ್ಯುತಗೊಳಿಸಿರುವುದಲ್ಲ, ಅವರಾಗಿಯೇ ನಾಯಕತ್ವ ಬೇಡ ಎಂದು ಹೊರನಡೆದಿದ್ದರು. ಹೀಗಿರುವಾಗ ಮತ್ತೆ ಅವರು ನಾಯಕತ್ವ ವಹಿಸುವ ಪ್ರಶ್ನೆಯೇ ಉದ್ಭವಿಸಲ್ಲ ಎಂದಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!