ಮುಂಬೈ: ಟಿ20 ವಿಶ್ವಕಪ್ ಗೆ ಮೊದಲು ಫಾರ್ಮ್ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಈಗ ಮತ್ತೆ ಕ್ರಿಕೆಟ್ ಕಣಕ್ಕೆ ಮರಳಲು ರೆಡಿಯಾಗಿದ್ದಾರೆ.
ಇಂಗ್ಲೆಂಡ್ ಸರಣಿ ಬಳಿಕ ಕೊಹ್ಲಿಗೆ ವೆಸ್ಟ್ ಇಂಡೀಸ್ ಸರಣಿಯಿಂದ ಸಂಪೂರ್ಣವಾಗಿ ವಿಶ್ರಾಂತಿ ನೀಡಲಾಗಿತ್ತು. ಇದನ್ನು ಹಲವು ಮಾಜಿ ಕ್ರಿಕೆಟಿಗರು ಪ್ರಶ್ನೆ ಮಾಡಿದ್ದರು. ಇದೀಗ ಜಿಂಬಾಬ್ವೆ ಸರಣಿಗೆ ಅವರು ತಂಡಕ್ಕೆ ಮರಳಲಿದ್ದಾರೆ.
ಜೊತೆಗೆ ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಮುನ್ನ ಭಾರತ ಆಡಲಿರುವ ಎಲ್ಲಾ ಉಭಯ ಸರಣಿಗಳಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೊಹ್ಲಿ ಈ ಬಾರಿ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವುದೇ ನನ್ನ ಗುರಿ ಎಂದಿದ್ದರು. ಅದರಂತೆ ನಡೆಯಬೇಕಾದರೆ ಅವರು ಫಾರ್ಮ್ ಗೆ ಮರಳಲೇಬೇಕು. ಅದಕ್ಕೆ ಅವರು ಸಾಕಷ್ಟು ಕ್ರಿಕೆಟ್ ಆಡಬೇಕು.