ಡುಬ್ಲಿನ್: ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಗೆ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಎನ್ ಸಿಎ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಇಂದು ಹಾರ್ದಿಕ್ ಪಡೆ ಡುಬ್ಲಿನ್ ನಲ್ಲಿ ಅಭ್ಯಾಸ ಆರಂಭಿಸಿದೆ. ಈ ವೇಳೆ ಕೋಚ್ ಆಗಿ ಹಾರ್ದಿಕ್ ಪಡೆ ಜೊತೆ ಮೀಟಿಂಗ್ ನಡೆಸಿ ಸಲಹೆ ಸೂಚನೆ ಕೊಟ್ಟ ವಿವಿಎಸ್ ಲಕ್ಷ್ಮಣ್ ಅಭ್ಯಾಸ ವೀಕ್ಷಿಸಿದರು.
ಇದೇ ಮೊದಲ ಬಾರಿಗೆ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವುದು ವಿಶೇಷ. ಖಾಯಂ ಕೋಚ್ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಇನ್ನೊಂದು ತಂಡದ ಜೊತೆ ಇಂಗ್ಲೆಂಡ್ ಸರಣಿಯಲ್ಲಿ ಕರ್ತವ್ಯದಲ್ಲಿರುವುದರಿಂದ ಈ ಬದಲಿ ವ್ಯವಸ್ಥೆ ಮಾಡಲಾಗಿದೆ.