Webdunia - Bharat's app for daily news and videos

Install App

ಟೀಂ ಇಂಡಿಯಾ ಮುಂದಿನ ಕೋಚ್ ಆಗಲು ವಿವಿಎಸ್ ಲಕ್ಷ್ಮಣ್ ಆಸಕ್ತಿ: ಘೋಷಣೆಯೊಂದೇ ಬಾಕಿ?

Webdunia
ಗುರುವಾರ, 23 ನವೆಂಬರ್ 2023 (16:19 IST)
Photo Courtesy: Twitter
ಮುಂಬೈ: ರಾಹುಲ್ ದ್ರಾವಿಡ್ ರಿಂದ ತೆರವಾಗಲಿರುವ ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ಎನ್ ಸಿಎ ಅಧ‍್ಯಕ್ಷ, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಆಗಮನವಾಗುವ ಸಾಧ‍್ಯತೆಯಿದೆ.

ವಿವಿಎಸ್ ಲಕ್ಷ್ಮಣ್ ಇದೀಗ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಹಂಗಾಮಿ ಕೋಚ್ ಆಗಿದ್ದಾರೆ. ಈಗಾಗಲೇ ಕೆಲವು ಸರಣಿಗಳಲ್ಲಿ ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಕೋಚ್ ಆಗಿ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು. ಅವರ ಮಾರ್ಗದರ್ಶನದಲ್ಲಿ ಭಾರತ ತಂಡಕ್ಕೆ ಯಶಸ್ಸೂ ಸಿಕ್ಕಿತ್ತು.

ಇದೀಗ ರಾಹುಲ್ ದ್ರಾವಿಡ್ ಮುಂದೆಯೂ ಕೋಚ್ ಆಗಿ ಮುಂದುವರಿಯಲು ನಿರಾಸಕ್ತಿ ತೋರಿಸಿದ್ದಾರೆ ಎನ್ನಲಾಗುತ್ತಿದೆ. ಅವರಿಗೆ ಮತ್ತೆ ಕೋಚ್ ಆಗಿ ಮುಂದುವರಿಯುವ ಇರಾದೆ ಇಲ್ಲ. ಹೀಗಾಗಿ ಮತ್ತೊಮ್ಮೆ ಆಯ್ಕೆ ಬಯಸಿ ಅರ್ಜಿ ಹಾಕುವುದು ಅನುಮಾನ. ಈ  ನಡುವೆ ವಿವಿಎಸ್ ಲಕ್ಷ್ಮಣ್ ಕೋಚ್ ಹುದ್ದೆಗೇರಲು ಆಸಕ್ತಿ ತೋರಿದ್ದಾರೆ.

ಹೀಗಾಗಿ ಬಿಸಿಸಿಐ ಲಕ್ಷ್ಮಣ್ ಅವರನ್ನೇ ಮುಂದಿನ ಮುಖ್ಯ ಕೋಚ್ ಆಗಿ ನೇಮಕ ಮಾಡುವ ಸಾಧ‍್ಯತೆಯಿದೆ. ಮುಂಬರುವ ದ.ಆಫ್ರಿಕಾ ವಿರುದ್ಧದ ಸರಣಿ ವೇಳೆಗೆ ಟೀಂ ಇಂಡಿಯಾಗೆ ಅಧಿಕೃತವಾಗಿ ಹೊಸ ಕೋಚ್ ನೇಮಕವಾಗಲಿದೆ. ಹೀಗಾಗಿ ಲಕ್ಷ್ಮಣ್ ಕೋಚ್ ಎಂದು ಅಧಿಕೃತವಾಗಿ ಘೋಷಿಸುವುದೊಂದೇ ಬಾಕಿ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments