ಮುಂಬೈ: ಆಗಸ್ಟ್ ನಲ್ಲಿ ಜಿಂಬಾಬ್ವೆ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ಮತ್ತೆ ವಿವಿಎಸ್ ಲಕ್ಷ್ಮಣ್ ಕೋಚ್ ಆಗಲಿದ್ದಾರೆ.
ಐರ್ಲೆಂಡ್ ಸರಣಿಗೆ ಮೊದಲ ಬಾರಿಗೆ ಟೀಂ ಇಂಡಿಯಾಗೆ ಲಕ್ಷ್ಮಣ್ ಕೋಚ್ ಆಗಿದ್ದರು. ಇದೀಗ ಮತ್ತೊಮ್ಮೆ ತಂಡದ ಕೋಚ್ ಹುದ್ದೆ ಅಲಂಕರಿಸಲಿದ್ದಾರೆ.
ಜಿಂಬಾಬ್ವೆಗೆ ಭಾರತದ ಬಿ ಟೀಂ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಈ ಸರಣಿಗೆ ರೆಗ್ಯುಲರ್ ಕೋಚ್ ರಾಹುಲ್ ದ್ರಾವಿಡ್ ಗೆ ವಿಶ್ರಾಂತಿ ನೀಡಿ ಯುವ ಆಟಗಾರರ ತಂಡಕ್ಕೆ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.