Publish Date: Tue, 02 Mar 2021 (09:16 IST)
Updated Date: Tue, 02 Mar 2021 (09:17 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಡಿಮೆ.
ಅಂತಿಮ ಟೆಸ್ಟ್ ಪಂದ್ಯಕ್ಕೆ ತಿರುವ ಪಡೆಯುವ ಪಿಚ್ ನಿರ್ಮಿಸುವ ಸಾಧ್ಯತೆಯಿದೆ. ಹೀಗಾಗಿ ಬುಮ್ರಾ ಸ್ಥಾನಕ್ಕೆ ಉಮೇಶ‍್ ಯಾದವ್ ಮತ್ತು ವಾಷಿಂಗ್ಟನ್ ಸ್ಥಾನಕ್ಕೆ ಕುಲದೀಪ್ ಯಾದವ್ ಗೆ ಸ್ಥಾನ ನೀಡುವ ಸಾಧ‍್ಯತೆಯಿದೆ. ವಾಷಿಂಗ್ಟನ್ ಸುಂದರ್ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಬೌಲಿಂಗ್ ನಲ್ಲಂತೂ ಅವಕಾಶವೇ ಸಿಕ್ಕಿರಲಿಲ್ಲ. ಹೀಗಾಗಿ ಅಂತಿಮ ಟೆಸ್ಟ್ ಗೆ ಅವರು ತಂಡದಲ್ಲಿ ಸ್ಥಾನ ಪಡೆಯುವುದು ಅನುಮಾನ.