ಸೋತ ಪಂದ್ಯದಲ್ಲಿ ಮಿಂಚಿದ ವಾಷಿಂಗ್ಟನ್ ಸುಂದರ್

Webdunia
ಶನಿವಾರ, 28 ಜನವರಿ 2023 (08:40 IST)
Photo Courtesy: Twitter
ರಾಂಚಿ: ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 21 ರನ್ ಗಳಿಂದ ಸೋತಿದೆ.
 

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 176 ರನ್ ಗಳ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಲಷ್ಟೇ ಶಕ್ತವಾಯಿತು.

ಭಾರತಕ್ಕೆ ಅಗ್ರ ಕ್ರಮಾಂಕದ ಬ್ಯಾಟಿಗರು ಕೈ ಕೊಟ್ಟಿದ್ದು ದುಬಾರಿಯಾಯಿತು. ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಬ್ಮನ್ ಗಿಲ್ 7 ರನ್ ಗೆ ಔಟಾದರೆ ಇಶಾನ್ ಕಿಶನ್ 4, ರಾಹುಲ್ ತ್ರಿಪಾಠಿ ಶೂನ್ಯಕ್ಕೆ ನಿರ್ಗಮಿಸಿದರು. ಇದರಿಂದಾಗಿ ಟೀಂ ಇಂಡಿಯಾ ಒತ್ತಡಕ್ಕೆ ಸಿಲುಕಿತು. ಈ  ವೇಳೆ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಜೋಡಿ ಚೇತರಿಕೆಯ ಲಕ್ಷಣ ತೋರಿದರಾದರೂ 47 ರನ್ ಗಳಿಸಿದ್ದ ಸೂರ್ಯ ಔಟಾಗುವುದರೊಂದಿಗೆ ಭಾರತ ಮತ್ತೆ ಕುಸಿತಕ್ಕೊಳಗಾಯಿತು. ಪಾಂಡ್ಯ 21 ರನ್, ದೀಪಕ್ ಹೂಡಾ 10 ರನ್ ಗಳಿಸಲಷ್ಟೇ ಶಕ್ತರಾದರು. ಈ ನಡುವೆ ಏಕಾಂಗಿ ಹೋರಾಟ ನಡೆಸಿದ ವಾಷಿಂಗ್ಟನ್ ಸುಂದರ್ ಕೇವಲ 28 ಎಸೆತಗಳಿಂದ 50 ರನ್ ಗಳಿಸಿ ಮಿಂಚಿದರು. ಇದರೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 0-1 ಅಂತರದಿಂದ ಹಿನ್ನಡೆ ಅನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments