ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 10 ವಿಕೆಟ್ ಗಳಿಂದ ಹೀನಾಯವಾಗಿ ಸೋತ ಬೆನ್ನಲ್ಲೇ ವಿರಾಟ್ ಕೊಹ್ಲಿ ಮಾಡಿದ್ದೇನು ಗೊತ್ತಾ?
ಎರಡನೇ ಟೆಸ್ಟ್ ಪಂದ್ಯವನ್ನು ಸೋತ ಟೀಂ ಇಂಡಿಯಾ ಸಾಕಷ್ಟು ಟೀಕೆಗೊಳಗಾಗಿದೆ. ಅದರಲ್ಲೂ ತಂಡದ ಹಿರಿಯ ಆಟಗಾರರ ಪ್ರದರ್ಶನದ ಬಗ್ಗೆ ಸಾಕಷ್ಟು ಆಕ್ರೋಶ ಕೇಳಿಬರುತ್ತಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮುಂತಾದ ಕ್ರಿಕೆಟಿಗರು ನಿವೃತ್ತಿಯಾಗಲಿ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸುತ್ತಿದ್ದಾರೆ.
ಇತ್ತೀಚೆಗೆ ಟಾಪ್ ಆರ್ಡರ್ ಬ್ಯಾಟಿಗರ ವೈಫಲ್ಯದಿಂದಲೇ ತಂಡ ಸೋಲುತ್ತಿರುವುದು ಇದಕ್ಕೆ ಕಾರಣವಾಗಿದೆ. ಈ ನಡುವೆ ಅಡಿಲೇಡ್ ಟೆಸ್ಟ್ ಸೋತ ಬೆನ್ನಲ್ಲೇ ವಿರಾಟ್ ಕೊಹ್ಲಿ ಸುಮ್ಮನೇ ಕೂತಿಲ್ಲ. ಟೆಸ್ಟ್ ಪಂದ್ಯ ಮುಗಿಯುತ್ತಿದ್ದಂತೇ ಮತ್ತೆ ಪ್ಯಾಡ್, ಬ್ಯಾಟ್ ಕಟ್ಟಿಕೊಂಡು ಅಭ್ಯಾಸ ಶುರು ಮಾಡಿದ್ದಾರೆ.
ಮುಂದಿನ ಪಂದ್ಯ ಡಿಸೆಂಬರ್ 14 ರಿಂದ ಗಬ್ಬಾ ಮೈದಾನದಲ್ಲಿ ನಡೆಯಲಿದ್ದು, ಅದಕ್ಕಾಗಿ ನಿನ್ನೆಯಿಂದಲೇ ತಯಾರಿ ಆರಂಭಿಸಿದ್ದಾರೆ. ಕೊಹ್ಲಿಯ ಈ ಡೆಡಿಕೇಷನ್ ಗೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಹೊಗಳಿದ್ದಾರೆ. ಇತರೆ ಆಟಗಾರರೂ ಅವರನ್ನು ನೋಡಿ ಕಲಿಯಬೇಕು ಎಂದು ಗವಾಸ್ಕರ್ ಹೇಳಿದ್ದಾರೆ.