Publish Date: Sun, 28 Oct 2018 (09:21 IST)
Updated Date: Sun, 28 Oct 2018 (09:22 IST)
ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಮಾಜಿ ನಾಯಕ, ಹಿರಿಯ ಕ್ರಿಕೆಟಿಗ ಧೋನಿಗೆ ಕೊಕ್ ನೀಡಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಭಾರತ ತಂಡ ಕಂಡ ಅತ್ಯಂತ ಶ್ರೇಷ್ಠ ನಾಯಕನಿಗೆ ಬಿಸಿಸಿಐ ಆಯ್ಕೆ ಸಮಿತಿ ಈ ರೀತಿ ಸ್ಥಾನ ಕೊಟ್ಟಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಇದೀಗ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.
‘ಭವಿಷ್ಯದ ದೃಷ್ಟಿಯಿಂದ ಎರಡನೇ ವಿಕೆಟ್ ಕೀಪರ್ ನನ್ನು ತಯಾರು ಮಾಡುವ ಉದ್ದೇಶದಿಂದ ಧೋನಿಗೆ ವಿಶ‍್ರಾಂತಿ ನೀಡಲಾಗಿದೆ. ಅದಕ್ಕಾಗಿ ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಗೆ ಸ್ಥಾನ ನೀಡಲಾಗಿದೆ’ ಎಂದು ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಹಾಗಿದ್ದರೂ ಧೋನಿಯನ್ನು ತಂಡದಲ್ಲಿ ಉಳಿಸಿಕೊಂಡೇ ಈ ಕೆಲಸ ಮಾಡಬಹುದಿತ್ತಲ್ಲವೇ ಎಂಬುದು ಧೋನಿ ಅಭಿಮಾನಿಗಳ ಪ್ರಶ್ನೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.