ಮೆಲ್ಬೊರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಮೆಲ್ಬೊರ್ನ್ ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ ಎನ್ನಲಾಗುತ್ತಿದೆ. ಇದಕ್ಕೆ ಬಾಕ್ಸಿಂಗ್ ಡೇ ಟೆಸ್ಟ್ ಎನ್ನುವುದೇಕೆ ಇಲ್ಲಿದೆ ಕಾರಣ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಇದಾಗಿದೆ. ನಾಳೆಯಿಂದ ಮೆಲ್ಬೊರ್ನ್ ಮೈದಾನದಲ್ಲಿ ಪಂದ್ಯ ನಡೆಯುವುದು. ಆದರೆ ಇದನ್ನು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಎಂದು ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ.
ಸಾಮಾನ್ಯವಾಗಿ ಕ್ರಿಸ್ ಮಸ್ ಬಳಿಕ ನಡೆಯುವ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ ಎನ್ನಲಾಗುತ್ತದೆ. ಕ್ರಿಸ್ ಮಸ್ ಮರುದಿನವೇ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ದ ಆಫ್ರಿಕಾದಲ್ಲಿ ನಡೆಯುವ ಟೆಸ್ಟ್ ಪಂದ್ಯಗಳನ್ನು ಬಾಕ್ಸಿಂಗ್ ಡೇ ಟೆಸ್ಟ್ ಎನ್ನಲಾಗುತ್ತದೆ.
ವಿಕ್ಟೋರಿಯನ್ ಕಾಲಘಟ್ಟದಲ್ಲಿ ಇಂಗ್ಲೆಂಡ್ ನಲ್ಲಿ ಕ್ರಿಸ್ ಮಸ್ ಮರುದಿನ ಅಂದರೆ ಡಿಸೆಂಬರ್ 26 ರಂದು ನೌಕರರಿಗೆ ಉಡುಗೊರೆಗಳ ಬಾಕ್ಸ್ ನೀಡಲಾಗುತ್ತಿತ್ತು. ಡಿಸೆಂಬರ್ 26 ರನ್ನು ಬಾಕ್ಸಿಂಗ್ ಡೇ ಎನ್ನಲಾಗುತ್ತದೆ. ಹೀಗಾಗಿಯೇ ಈ ಪಂದ್ಯಕ್ಕೆ ಬಾಕ್ಸಿಂಗ್ ಡೇ ಟೆಸ್ಟ್ ಎಂದೇ ಕರೆಯಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಆಸ್ಟ್ರೇಲಿಯಾದಲ್ಲಿ ಪ್ರತೀ ವರ್ಷ ಕ್ರಿಸ್ ಮಸ್ ಮರುದಿನ ಮೆಲ್ಬೊರ್ನ್ ನಲ್ಲೇ ಬಾಕ್ಸಿಂಗ್ ಡೇ ಟೆಸ್ಟ್ ಆಯೋಜಿಸುವುದು ವಾಡಿಕೆಯಾಗಿದೆ.