ಮುಂಬೈ: ಬಾಲಿವುಡ್ ಬೆಡಗಿ ಪ್ರೀತಿ ಝಿಂಟಾ ಐಪಿಎಲ್ ನ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲಕಿ. ಆದರೆ ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪ್ರೀತಿ ಕಾಣಿಸಿಕೊಳ್ಳಲಿಲ್ಲ. ಯಾಕೆ ಎನ್ನುವುದೇ ಎಲ್ಲರ ಪ್ರಶ್ನೆಯಾಗಿತ್ತು.
ಹರಾಜು ಪ್ರಕ್ರಿಯೆ ಆರಂಭವಾದ ಕೂಡಲೇ ಐಪಿಎಲ್ ಹರಾಜು ಪ್ರಕ್ರಿಯೆಯನ್ನು ಎದುರು ನೋಡುತ್ತಿರುವುದಾಗಿ ಪ್ರೀತಿ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದರು. ಅಭಿಮಾನಿಯೊಬ್ಬರು ನೇರವಾಗಿ ನೀವೇಕೆ ಹರಾಜಿನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಕೇಳಿಯೂ ಬಿಟ್ಟರು.
ಇದಕ್ಕೆ ಉತ್ತರಿಸಿದ ಪ್ರೀತಿ ನಾನು ಸ್ವಲ್ಪ ಬ್ಯುಸಿ ಇದ್ದೇನೆ. ನನ್ನ ಬದಲಿಗೆ ಅಲ್ಲಿ ಮೆಂಟರ್ ವೀರೇಂದ್ರ ಸೆಹ್ವಾಗ್ ಇದ್ದು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ ಎಂದುತ್ತರಿಸಿದ್ದರು. ಪಂಜಾಬ್ ತಂಡ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಸೇರಿದಂತೆ ಒಟ್ಟು 9.5 ಕೋಟಿ ರೂ. ವೆಚ್ಚ ಮಾಡಿ ಆಟಗಾರರನ್ನು ಖರೀದಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ