ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲಲು ಇದುವೇ ಕಾರಣ!

Webdunia
ಶನಿವಾರ, 7 ಜುಲೈ 2018 (09:49 IST)
ಕಾರ್ಡಿಫ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ಟೀಂ ಇಂಡಿಯಾ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಇಷ್ಟು ಹೀನಾಯವಾಗಿ ಸೋತಿದ್ದು ಹೇಗೆ?

 
ಅದಕ್ಕೆ ಉತ್ತರ ಸ್ವತಃ ನಾಯಕ ವಿರಾಟ್ ಕೊಹ್ಲಿ ನೀಡಿದ್ದಾರೆ. ಮೊದಲ ಪಂದ್ಯದಲ್ಲಿ ಅತಿಥೇಯರಿಗೆ ಭಾರತದ ಸ್ಪಿನ್ನರ್ ಕುಲದೀಪ್ ಯಾದವ್ ದುಸ್ವಪ್ನರಾಗಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ಅವರನ್ನು ಎದುರಿಸುವ ಬಗೆ ಹೇಗೆಂದು ತಯಾರಿ ಮಾಡಿಕೊಂಡು ಬರುವುದಾಗಿ ಹೇಳಿದ್ದರು.

ಅದರಂತೇ ಇಂಗ್ಲೆಂಡ್ ಕ್ರಿಕೆಟಿಗರು ರಿಸ್ಟ್ ಸ್ಪಿನ್ನರ್ ಗಳನ್ನು ಎದುರಿಸುವ ಕಲೆಯನ್ನು ಕರಗತ ಮಾಡಿಕೊಂಡು ಬಂದಿದ್ದರು. ಅದರಂತೇ ಆಡಿ ಗೆದ್ದರು. ‘ಈಗ ಕುಲದೀಪ್ ರನ್ನು ಎದುರಿಸುವುದು ಹೇಗೆಂದು ಇಂಗ್ಲೆಂಡ್ ಕ್ರಿಕೆಟಿಗರು ಅರಿತಿದ್ದಾರೆ. ಇದುವೇ ನಮಗೆ ದೊಡ್ಡ ಹೊಡೆತ ನೀಡಿತು. ಇನ್ನು, 6 ಓವರ್ ಗಳಲ್ಲಿ ಕೇವಲ 30 ರನ್ ಗಳಿಸಿ 3 ವಿಕೆಟ್ ಉದುರಿಸಿಕೊಂಡಾಗ ದೊಡ್ಡ ಮೊತ್ತ ಗಳಿಸುವುದು ಕಷ್ಟವೇ. ಕೊನೆಗೆ ಹೇಲ್ಸ್ ನಮ್ಮಿಂದ ಪಂದ್ಯ ಕಸಿದುಕೊಂಡರು’ ಎಂದು ವಿರಾಟ್ ಕೊಹ್ಲಿ ಪಂದ್ಯ ನಂತರ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments