Publish Date: Sun, 19 Aug 2018 (08:55 IST)
Updated Date: Sun, 19 Aug 2018 (08:56 IST)
ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.
ಸಾಮಾನ್ಯವಾಗಿ ಸಂತಾಪ ಸೂಚಕವಾಗಿ ಕ್ರಿಕೆಟಿಗರು ಈ ರೀತಿ ಕಪ್ಪು ಪಟ್ಟಿ ಧರಿಸಿ ಆಡುತ್ತಾರೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗರೂ ಅದೇ ಕಾರಣಕ್ಕೆ ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.
ಮೊನ್ನೆಯಷ್ಟೇ ನಿಧನರಾದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ಅಜಿತ್ ವಾಡೇಕರ್ ನಿಧನಕ್ಕೆ ಸಂತಾಪ ಸೂಚಿಸಿ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.