ಟೀಂ ಇಂಡಿಯಾ ಆಯ್ಕೆ ತಡವಾಗುತ್ತಿರುವುದಕ್ಕೆ ಕಾರಣ ಯಾರು?

Krishnaveni K
ಶುಕ್ರವಾರ, 9 ಫೆಬ್ರವರಿ 2024 (11:37 IST)
ಮುಂಬೈ: ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಇದಕ್ಕೆ ಕಾರಣ ಯಾರು ಎಂಬ ಬಗ್ಗೆ ಈಗ ಭಾರೀ ಚರ್ಚೆಯಾಗುತ್ತಿದೆ.

ನಿನ್ನೆ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ನಡೆಯಬಹುದು ಎನ್ನಲಾಗಿತ್ತು. ಆದರೆ ಅದು ನಡೆದಿಲ್ಲ. ಕೆಲವರು ಇದಕ್ಕೆ ವಿರಾಟ್ ಕೊಹ್ಲಿ ಲಭ್ಯತೆ ಬಗ್ಗೆ ಇರುವ ಗೊಂದಲವೇ ಕಾರಣ ಎನ್ನುತ್ತಿದ್ದಾರೆ. ಆದರೆ ಬಿಸಿಸಿಐ ಕೊಹ್ಲಿಗಾಗಿ ಕಾಯುತ್ತಿಲ್ಲ. ಇದರ ಅಸಲಿ ವಿಚಾರ ಬೇರೆಯೇ ಇದೆ ಎನ್ನಲಾಗಿದೆ.

ಕೊಹ್ಲಿ ಇನ್ನೂ ಎರಡು ಟೆಸ್ಟ್ ಗಳಿಗೆ ಲಭ್ಯರಿರಲ್ಲ ಎನ್ನಲಾಗಿದೆ. ಈ ಬಗ್ಗೆ ಬಿಸಿಸಿಐಗೆ ಕೊಹ್ಲಿ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ ಎಂದೂ ಹೇಳಲಾಗಿದೆ. ಹೀಗಾಗಿ ಕೊಹ್ಲಿ ವಿಚಾರದಲ್ಲಿ ಬಿಸಿಸಿಐಗೆ ಯಾವುದೇ ಅನುಮಾನವಿಲ್ಲ. ಆದರೆ ಬಿಸಿಸಿಐ ಕಾಯುತ್ತಿರುವುದು ರವೀಂದ್ರ ಜಡೇಜಾ, ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ವರದಿಗೆ.

ಮೊಣಕಾಲು ನೋವಿಗೊಳಗಾಗಿರುವ ರವೀಂದ್ರ ಜಡೇಜಾ ಇದೀಗ ಫಿಟ್ ಆಗುತ್ತಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅತ್ತ ಕೆಎಲ್ ರಾಹುಲ್ ಕೂಡಾ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಇವರಿಬ್ಬರೂ ಸಂಪೂರ್ಣ ಫಿಟ್ ಆಗಿರುವ ವರದಿ ಕೈ ಸೇರಲು ಆಯ್ಕೆ ಸಮಿತಿ ಕಾಯುತ್ತಿದೆ. ಬುಮ್ರಾ ಕೂಡಾ ಬಳಲಿದ್ದು, ಅವರೂ ಕೂಡಾ ವೈದ್ಯರ ವರದಿಗೆ ಕಾಯುತ್ತಿದ್ದಾರೆ. 

ಮುಂದಿನ ಪಂದ್ಯಗಳು ಸರಣಿ ನಿರ್ಣಾಯಕವಾಗಿದ್ದು, ಮುಂದಿನ ಪಂದ್ಯಗಳಿಗೆ ಈ ಸ್ಟಾರ್ ಆಟಗಾರರ ಲಭ್ಯತೆ ಮುಖ್ಯವಾಗುತ್ತದೆ. ಹೀಗಾಗಿ ಬಿಸಿಸಿಐ ಆಯ್ಕೆ ಸಮಿತಿ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎರಡು ವರ್ಷದ ನಂತರ ಟ್ರೈನಿಂಗ್ ಫೋಟೋ ಹಂಚಿಕೊಂಡ ಕೊಹ್ಲಿ: ಅಷ್ಟಕ್ಕೂ ಕಿಂಗ್ ಹಂಚಿಕೊಳ್ಳದೇ ಇದ್ದಿದ್ದು ಯಾಕೆ

ಡಬ್ಲ್ಯುಪಿಎಲ್ 2026 ಇಂದಿನಿಂದ ಶುರು: ಆರ್ ಸಿಬಿ ವರ್ಸಸ್ ಮುಂಬೈ ಪಂದ್ಯ ಶುರು ಎಷ್ಟೊತ್ತಿಗೆ

ದಿಡೀರ್ ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟಿಗ ತಿಲಕ್ ವರ್ಮಾ: ಅಂತಹದ್ದೇನಾಯ್ತು

ಶಫಾಲಿ ವರ್ಮಗೆ ಏನೇ ಇದ್ರೂ ನನಗೊಂದು ಕಾಲ್ ಮಾಡು ಎಂದಿದ್ರೆಂತೆ ಸಚಿನ್ ತೆಂಡುಲ್ಕರ್

ವಿಮಾನ ನಿಲ್ದಾಣದಲ್ಲಿ ಮಗುವನ್ನು ರಕ್ಷಿಸಿದ ರೋಹಿತ್ ಶರ್ಮಾ: viral video

ಮುಂದಿನ ಸುದ್ದಿ
Show comments