Webdunia - Bharat's app for daily news and videos

Install App

Virat Kohli: ಎಲ್ಲಾ ಬಿಟ್ಟು ಫಾರ್ಮ್ ಕಂಡುಕೊಳ್ಳಲು ವಿರಾಟ್ ಕೊಹ್ಲಿ ಇವರನ್ನೇ ಆಯ್ಕೆ ಮಾಡಿದ್ದೇಕೆ

Krishnaveni K
ಸೋಮವಾರ, 27 ಜನವರಿ 2025 (11:36 IST)
Photo Credit: X
ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ತೀರಾ ಕಳಪೆ ಫಾರ್ಮ್ ನಿಂದಾಗಿ ತೀವ್ರ ಟೀಕೆಗೊಳಗಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಫಾರ್ಮ್ ಕಂಡುಕೊಳ್ಳಲು ಇವರನ್ನೇ ಆಯ್ಕೆ ಮಾಡಿರುವುದೇಕೆ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ವಿರಾಟ್ ಕೊಹ್ಲಿ ಕಳೆದ ಒಂದು ವರ್ಷದಿಂದ ಹೇಳಿಕೊಳ್ಳುವಂತಹ ಫಾರ್ಮ್ ನಲ್ಲಿಲ್ಲ. ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಸರಣಿಯಲ್ಲೂ ವಿಫಲರಾಗಿದ್ದರು. ಈ ಕಾರಣಕ್ಕೆ ಅವರನ್ನೂ ತಂಡದಿಂದ ಕಿತ್ತು ಹಾಕಬೇಕು, ನಿವೃತ್ತಿಯಾಗಲಿ ಎಂಬಿತ್ಯಾದಿ ಸಲಹೆಗಳು ಕೇಳಿಬರುತ್ತಲೇ ಇದೆ.

ಅದರಲ್ಲೂ ವಿಶೇಷವಾಗಿ ಕೊಹ್ಲಿ ಪದೇ ಪದೇ ಆಫ್ ಸ್ಟಂಪ್ ಆಚೆ ಹೋಗುವ ಬಾಲ್ ನ್ನೇ ಕೆಣಕಿ ಔಟಾಗುತ್ತಿದ್ದಾರೆ. ಮಾಡಿದ ತಪ್ಪನ್ನೇ ಪದೇ ಪದೇ ಮಾಡುತ್ತಿರುವುದೂ ಅವರ ಮೇಲೆ ಟೀಕೆ ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೇ ಕೊಹ್ಲಿ ಈಗ ತಮ್ಮ ಬ್ಯಾಟಿಂಗ್ ಸುಧಾರಿಸಲು ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಮೊರೆ ಹೋಗಿದ್ದಾರೆ.

ಎಲ್ಲರಿಗೂ ಗೊತ್ತಿರುವ ಹಾಗೆ ಸಂಜಯ್ ಬಂಗಾರ್ ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಆಗಿದ್ದರು. ಅವರು ಕೋಚ್ ಆಗಿದ್ದಾಗ ಕೊಹ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದರು. ಹೀಗಾಗಿ ಕೊಹ್ಲಿ ಎಲ್ಲರನ್ನೂ ಬಿಟ್ಟು ಸಂಜಯ್ ಬಂಗಾರ್ ಸಹಾಯ ಪಡೆಯುತ್ತಿದ್ದಾರೆ. ಜನವರಿ 30 ರಿಂದ ದೆಹಲಿ ಪರವಾಗಿ ಅವರು ರಣಜಿ ಪಂದ್ಯವನ್ನೂ ಆಡಲಿದ್ದಾರೆ. ಈ ಪಂದ್ಯಕ್ಕೆ ಅಭ್ಯಾಸ ಆರಂಭಿಸಿರುವ ಅವರು ಸಂಜಯ್ ಬಂಗಾರ್ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments