Webdunia - Bharat's app for daily news and videos

Install App

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

Webdunia
ಭಾನುವಾರ, 31 ಡಿಸೆಂಬರ್ 2023 (14:44 IST)
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿರುದ್ಧ ಟೀಕೆಗಳ ಸುರಿಮಳೆಯಾಗಿದೆ.

ಟೀಂ ಇಂಡಿಯಾ ತಂಡವಾಗಿ ಕಳಪೆ ಪ್ರದರ್ಶನ ನೀಡಿದ್ದು ಮಾತ್ರವಲ್ಲ, ನಾಯಕ ರೋಹಿತ್ ಶರ್ಮಾ ಕೂಡಾ ಎರಡೂ ಇನಿಂಗ್ಸ್ ಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಟೆಸ್ಟ್ ಕ್ರಿಕೆಟ್ ನಲ್ಲಿ ಅದರಲ್ಲೂ ವಿದೇಶದಲ್ಲಿ ಇತ್ತೀಚೆಗೆ ರೋಹಿತ್ ರನ್ ಗಳಿಕೆ ದಾಖಲೆಯೂ ಉತ್ತಮವಾಗಿಲ್ಲ.

ಈ ಕಾರಣಕ್ಕೆ ರೋಹಿತ್ ಶರ್ಮಾ ವಿರುದ್ಧ ಮಾಜಿ ಕ್ರಿಕೆಟಿಗ ಸುಬ್ರಮಣಿಯನ್ ಬದರಿನಾಥ್ ಟೀಕಾ ಪ್ರಹಾರ ನಡೆಸಿದ್ದಾರೆ. ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ತಂಡದಲ್ಲಿರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಟೆಸ್ಟ್ ತಂಢದ ನಾಯಕರಾಗಿದ್ದಾರೆ ಎಂದು ಬದರಿನಾಥ್ ಟೀಕಿಸಿದ್ದಾರೆ.

‘ಟೆಸ್ಟ್ ಕ್ರಿಕೆಟ್ ನಾಯಕನಾಗಿ ಕೊಹ್ಲಿ ದಾಖಲೆ ಉತ್ತಮವಾಗಿದೆ. ನಾಯಕನಾಗಿ 5000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.68 ಟೆಸ್ಟ್ ಗಳಿಂದ 47 ಗೆಲುವು ಸಂಪಾದಿಸಿದ್ದಾರೆ. ಅತ್ಯಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕ ಎಂಬ ದಾಖಲೆ ಅವರದ್ದು. ಹಾಗಿರುವಾಗ ವಿರಾಟ್ ಯಾಕೆ ಟೆಸ್ಟ್ ತಂಡದ ನಾಯಕನಾಗಿಲ್ಲ? ಕೊಹ್ಲಿ ಮತ್ತು ರೋಹಿತ್ ನಡುವೆ ಹೋಲಿಕೆಯೇ ಇಲ್ಲ. ಟೆಸ್ಟ್ ತಂಡದ ಆರಂಭಿಕರಾಗಿ ರೋಹಿತ್ ಇದುವರೆಗೆ ಏನೂ ಸಾಧಿಸಿಲ್ಲ. ಅಂತಹವರು ಯಾಕೆ ನಾಯಕರಾಗಿದ್ದಾರೆ?’ ಎಂದು ಬದರಿನಾಥ್ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments