Select Your Language

Notifications

webdunia
webdunia
webdunia
Tuesday, 8 April 2025
webdunia

ನಾಯಕತ್ವದ ಕಳಪೆ ದಾಖಲೆ ಅಳಿಸುತ್ತಾರಾ ಕೆಎಲ್ ರಾಹುಲ್?

ಕೆಎಲ್ ರಾಹುಲ್
ಮೊಹಾಲಿ , ಶುಕ್ರವಾರ, 22 ಸೆಪ್ಟಂಬರ್ 2023 (08:30 IST)
ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾಗೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ.

ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಕೆಎಲ್ ರಾಹುಲ್ ನಾಯಕರಾಗಿ ಹೆಚ್ಚಿನ ಯಶಸ್ಸು ಪಡೆದಿಲ್ಲ. ಈ ಮೊದಲು ರಾಹುಲ್ ಒಟ್ಟು 7 ಸೀಮಿತ ಓವರ್ ಗಳ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದಾರೆ. ಈ ಪೈಕಿ ನಾಲ್ಕು ಗೆಲುವು ಮೂರು ಸೋಲು ಕಂಡಿದ್ದಾರೆ.

ಜಿಂಬಾಬ್ವೆ ವಿರುದ್ಧ ಎರಡು ಪಂದ್ಯಗಳಲ್ಲಿ ಮತ್ತು ಬಾಂಗ್ಲಾದೇಶ ವಿರುದ್ಧ ಒಂದು ಪಂದ್ಯದಲ್ಲಿ ಗೆಲುವು ಸಿಕ್ಕಿತ್ತು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಮೂರೂ ಪಂದ್ಯಗಳನ್ನು ಹೀನಾಯವಾಗಿ ಸೋತಿತ್ತು. ಹೀಗಾಗಿ ರಾಹುಲ್ ಸೀಮಿತ ಓವರ್ ಗಳ ನಾಯಕತ್ವದ ಬಗ್ಗೆ ಟೀಕೆ ಎದುರಿಸಿದ್ದರು.

ಏಷ್ಯಾ ಕಪ್ ನಲ್ಲಿ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಜೊತೆಗೆ ಕೀಪರ್ ಆಗಿಯೂ ಬೌಲರ್ ಗಳಿಗೆ ಸಲಹೆ ನೀಡಿದ ಪರಿ ಎಲ್ಲರ ಗಮನ ಸೆಳೆದಿದೆ. ಹೀಗಾಗಿ ಈ ಬಾರಿ ರಾಹುಲ್ ಯಶಸ್ಸು ಗಳಿಸುವ ವಿಶ್ವಾಸದಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ಇಂದು ಶುರು: ವಿಶ್ವಕಪ್ ಗೆ ಪೂರ್ವತಯಾರಿ