Publish Date: Thu, 20 Jul 2023 (08:50 IST)
Updated Date: Thu, 20 Jul 2023 (08:59 IST)
ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಕೆಲವು ಬದಲಾವಣೆ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಸೂಚನೆ ನೀಡಿದೆ.
ಲೇಟೆಸ್ಟ್ ಮಾಹಿತಿ ಪ್ರಕಾರ, ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಅಜಿಂಕ್ಯಾ ರೆಹಾನೆ ಅಥವಾ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ‍್ಯತೆ ಕಡಿಮೆ. ಹೀಗಾಗಿ ರೆಹಾನೆ ಹೊರಗುಳಿಯುವ ಸಾಧ‍್ಯತೆಯೇ ಹೆಚ್ಚು.
ಕಳೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ ಪದಾರ್ಪಣೆ ಮಾಡಿದ್ದರು. ಯಶಸ್ವಿ ಶತಕ ಗಳಿಸಿ ಆಯ್ಕೆ ಸಮರ್ಥಿಸಿಕೊಂಡಿದ್ದರು. ಇದೀಗ ಋತುರಾಜ್ ಗಾಯಕ್ ವಾಡ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ.