Publish Date: Fri, 28 Jun 2019 (08:59 IST)
Updated Date: Fri, 28 Jun 2019 (09:04 IST)
ಲಂಡನ್: ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಗೆಲುವಿನ ನಾಗಲೋಟ ಮುಂದುವರಿಸಿದ್ದು, ನಿನ್ನೆ ನಡೆದ ಪಂದ್ಯದಲ್ಲಿ ವಿಂಡೀಸ್ ವಿರುದ್ಧ 125 ರನ್ ಗಳ ಗೆಲುವು ಸಾಧಿಸಿದೆ.
ಇದರೊಂದಿಗೆ ಆಡಿದ ಐದೂ ಪಂದ್ಯಗಳ್ನು ಗೆದ್ದು 11 ಅಂಕ ಸಂಪಾದಿಸಿರುವ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದು, ಸೆಮಿಫೈನಲ್ ಹಂತಕ್ಕೆ ಬಂದು ನಿಂತಿದೆ.
ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 268 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ವಿಂಡೀಸ್ ಭಾರತೀಯ ಬೌಲರ್ ಗಳ ಸಂಘಟಿತ ದಾಳಿಗೆ ಕುಸಿದು 34.2 ಓವರ್ ಗಳಲ್ಲೇ 143 ರನ್ ಗಳಿಗೆ ಆಲೌಟ್ ಆಯಿತು. 72 ರನ್ ಗಳಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಬೌಲಿಂಗ್ ನಲ್ಲಿ ಮೊಹಮ್ಮದ್ ಶಮಿ 4, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್ 2, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ತಲಾ 1 ವಿಕೆಟ್ ಕಬಳಿಸಿದರು.