Webdunia - Bharat's app for daily news and videos

Install App

ವಿಶ್ವಕಪ್ 2019: ಸೆಮಿಫೈನಲ್ ಗೇರಲು ಟೀಂ ಇಂಡಿಯಾಕ್ಕೆ ಇನ್ನೊಂದೇ ಹೆಜ್ಜೆ

Webdunia
ಶುಕ್ರವಾರ, 28 ಜೂನ್ 2019 (08:59 IST)
ಲಂಡನ್: ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಗೆಲುವಿನ ನಾಗಲೋಟ ಮುಂದುವರಿಸಿದ್ದು, ನಿನ್ನೆ ನಡೆದ ಪಂದ್ಯದಲ್ಲಿ ವಿಂಡೀಸ್ ವಿರುದ್ಧ 125 ರನ್ ಗಳ ಗೆಲುವು ಸಾಧಿಸಿದೆ.


ಇದರೊಂದಿಗೆ ಆಡಿದ ಐದೂ ಪಂದ್ಯಗಳ್ನು ಗೆದ್ದು 11 ಅಂಕ ಸಂಪಾದಿಸಿರುವ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದು, ಸೆಮಿಫೈನಲ್ ಹಂತಕ್ಕೆ ಬಂದು ನಿಂತಿದೆ.

ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 7  ವಿಕೆಟ್ ನಷ್ಟಕ್ಕೆ 268 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ವಿಂಡೀಸ್  ಭಾರತೀಯ ಬೌಲರ್ ಗಳ ಸಂಘಟಿತ ದಾಳಿಗೆ ಕುಸಿದು 34.2 ಓವರ್ ಗಳಲ್ಲೇ 143 ರನ್ ಗಳಿಗೆ ಆಲೌಟ್ ಆಯಿತು. 72 ರನ್ ಗಳಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಬೌಲಿಂಗ್ ನಲ್ಲಿ ಮೊಹಮ್ಮದ್ ಶಮಿ 4, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್  2, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ತಲಾ 1 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments