ಅಹಮ್ಮದಾಬಾದ್: ಅಸಂಖ್ಯಾತ ಅಭಿಮಾನಿಗಳ ಕನಸು ಕೊನೆಗೂ ಈಡೇರಲೇ ಇಲ್ಲ. ವಿಶ್ವಕಪ್ ಈ ಬಾರಿ ನಮ್ಮದೇ ಎಂಬ ವಿಶ್ವಾಸದಲ್ಲಿದ್ದ ಟೀಂ ಇಂಡಿಯಾ ಕ್ರಿಕೆಟಿಗರಿಗೂ ಇದೀಗ ಸೋಲು ಅರಗಿಸಿಕೊಳ್ಳಲಾಗುತ್ತಿಲ್ಲ.
ಆಸ್ಟ್ರೇಲಿಯಾ 6 ವಿಕೆಟ್ ಗಳಿಂದ ಫೈನಲ್ ಪಂದ್ಯ ಗೆಲ್ಲುತ್ತಿದ್ದಂತೇ ಟೀಂ ಇಂಡಿಯಾ ಕ್ರಿಕೆಟಿಗರು ಮೈದಾನದಲ್ಲೇ ಕಣ್ಣೀರಾದರು. ವಿಕೆಟ್ ಕೀಪರ್ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಮೈದಾನದಲ್ಲೇ ಕುಸಿದು ಕುಳಿತು ಕಣ್ಣೀರು ಹಾಕಿದ್ದಾರೆ.
ಜಸ್ಪ್ರೀತ್ ಬುಮ್ರಾ ಮೈದಾನದಲ್ಲಿದ್ದ ಪ್ರೇಕ್ಷಕರ ಕಡೆಗೆ ಕೈ ಬೀಸಿ ಇಷ್ಟು ದಿನ ಬೆಂಬಲಿಸುತ್ತಾ ಬಂದಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ಶಾಕ್ ನಲ್ಲಿದ್ದರು. ಆದರೆ ರೋಹಿತ್ ಶರ್ಮಾ ಮಾತ್ರ ದುಃಖ ತಡೆದುಕೊಂಡು ಎದುರಾಳಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡಿದ್ದಾರೆ.