ಡಬ್ಲ್ಯುಪಿಎಲ್ 2024: ದೆಹಲಿಯಲ್ಲಿ ಇಂದು ಗುಜರಾತ್ ವಿರುದ್ಧ ಆರ್ ಸಿಬಿ ಪಂದ್ಯ

Krishnaveni K
ಬುಧವಾರ, 6 ಮಾರ್ಚ್ 2024 (10:10 IST)
ನವದೆಹಲಿ: ಇಷ್ಟು ದಿನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಂಗೇರಿಸಿದ್ದ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಈಗ ರಾಷ್ಟ್ರ ರಾಜಧಾನಿ ದೆಹಲಿಗೆ ಕಾಲಿಟ್ಟಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವೆ ಪಂದ್ಯ ನಡೆಯಲಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿದ್ದ ಕೊನೆಯ ಪಂದ್ಯದಲ್ಲಿ ಭರ್ಜರಿ ಗೆಲುವು ಕಂಡ ಆತ್ಮವಿಶ್ವಾಸದಲ್ಲಿರುವ ಸ್ಮೃತಿ ಮಂಧಾನ ಪಡೆ ಈಗ ದೆಹಲಿಯಲ್ಲಿ ಅದೇ ಪ್ರದರ್ಶನ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.

ಇದುವರೆಗೆ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ ಆರ್ ಸಿಬಿ ಮೂರು ಗೆಲುವು ಕಂಡಿದ್ದು, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮೊದಲ ಎರಡು ಪಂದ್ಯಗಳಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ್ದ ಆರ್ ಸಿಬಿ ಮುಂದಿನ ಎರಡು ಪಂದ್ಯಗಳಲ್ಲಿ ಪ್ರಬಲ ಡೆಲ್ಲಿ, ಮುಂಬೈ ವಿರುದ್ಧ ಸೋತಿತ್ತು. ಆದರೆ ಕಳೆದ ಪಂದ್ಯದಲ್ಲಿ ಯುಪಿ ವಿರುದ್ಧ ಗೆಲುವು ಸಾಧಿಸಿದ್ದು, ಆರ್ ಸಿಬಿ ಆತ್ಮವಿಶ್ವಾಸ ಹೆಚ್ಚಿಸಿದೆ. ನಾಯಕಿ ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ ಫಾರ್ಮ್ ನಲ್ಲಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಬೌಲಿಂಗ್ ನಲ್ಲಿ ಸೋಫಿ ಡಿವೈನ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಡೆಲ್ಲಿ ಮೈದಾನ ಸ್ಪಿನ್ನರ್ ಗಳಿಗೂ ನೆರವು ನೀಡುವ ವಿಶ್ವಾಸವಿದ್ದು, ಶ್ರೇಯಾಂಕ ಪಾಟೀಲ್ ಮಿಂಚಬಹುದು.

ಅತ್ತ ಗುಜರಾತ್ ಇದುವರೆಗೆ ಆಡಿದ ಎಲ್ಲಾ ಪಂದ್ಯಗಳನ್ನೂ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಕಳೆದ ಬಾರಿ ಆರ್ ಸಿಬಿ ಮುಖಾಮುಖಿಯಾಗಿದ್ದಲೂ ಗುಜರಾತ್ ಸೋಲು ಅನುಭವಿಸಿತ್ತು. ಆದರೆ ಇದೀಗ ವಿಭಿನ್ನ ಪಿಚ್ ನಲ್ಲಿ ತಿರುಗಿಬೀಳುವ ವಿಶ್ವಾಸದಲ್ಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಅಫೇರ್

ಭಾರತ, ದಕ್ಷಿಣ ಆಫ್ರಿಕಾ ಮಹಿಳೆಯರ ವಿಶ್ವಕಪ್ ಪಂದ್ಯ ನಡೆಸಲು ಇಂದು ಇದರದ್ದೇ ಭಯ

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮುಂದಿನ ಸುದ್ದಿ
Show comments