Select Your Language

Notifications

webdunia
webdunia
webdunia
webdunia

WPL 2024: ಚಿನ್ನಸ್ವಾಮಿ ಮೈದಾನದಲ್ಲಿ ಶಾರುಖ್ ಖಾನ್ ಡ್ಯಾನ್ಸ್ ಪ್ರಾಕ್ಟೀಸ್

WPL
Photo Courtesy: Twitter
ಬೆಂಗಳೂರು: ಡಬ್ಲ್ಯುಪಿಎಲ್ ಟೂರ್ನಿಯ ಉದ್ಘಾಟನಾ ಸಮಾರಂಭ ಇಂದು ಸಂಜೆ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಬಾಲಿವುಡ್ ತಾರೆ ಶಾರುಖ್ ಖಾನ್ ಸೇರಿದಂತೆ ಸೆಲೆಬ್ರಿಟಿಗಳು ಡ್ಯಾನ್ಸ್ ಮಾಡಲಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು ಡಬ್ಲ್ಯುಪಿಎಲ್ ಎರಡನೇ ಆವೃತ್ತಿಯ ಟೂರ್ನಿಗೆ ಚಾಲನೆ ಸಿಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಆರಂಭಿಕ ಹಂತದ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಿರುವುದು ಇಲ್ಲಿನ ಅಭಿಮಾನಿಗಳಿಗೆ ಖುಷಿಯ ಸಂಗತಿಯಾಗಿದೆ.

ಈ ಬಾರಿಯೂ ಡಬ್ಲ್ಯುಪಿಎಲ್ ಟೂರ್ನಿಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ. ಬಾಲಿವುಡ್ ನಟ ಶಾರುಖ್ ಖಾನ್, ಸಿದ್ಧಾರ್ಥ್ ಮಲ್ಹೋತ್ರಾ ಸೇರದಿಂತೆ ಗಣ‍್ಯರು ಮನರಂಜನಾ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸಂಜೆ 5 ರ ಬಳಿಕ ವರ್ಣರಂಜಿ ಉದ್ಘಾಟನಾ ಕಾರ್ಯಕ್ರಮ ನಡೆಯುತ್ತಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾರುಖ್ ತಮ್ಮ ಪಠಾಣ್ ಸಿನಿಮಾದ ಟೈಟಲ್ ಸಾಂಗ್ ಸೇರಿದಂತೆ ಇತ್ತೀಚೆಗಿನ ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬಂದಿರುವ ಶಾರುಖ್ ಚಿನ್ನಸ್ವಾಮಿ ಅಂಗಳದಲ್ಲಿ ಒಂದು ಸುತ್ತಿನ ಪ್ರಾಕ್ಟೀಸ್ ಕೂಡಾ ಮಾಡಿದ್ದಾರೆ. ಶಾರುಖ್ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈದಾನಕ್ಕೆ ಬಂದ ಶಾರುಖ್ ಮುಂಬೈ ಮತ್ತು ಡೆಲ್ಲಿ ತಂಡದ ಕ್ರಿಕೆಟ್ ಆಟಗಾರ್ತಿಯರನ್ನು ಖುದ್ದಾಗಿ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ಕೊನೆಯಲ್ಲಿ ಎಲ್ಲರೊಂದಿಗೆ ಸೆಲ್ಫೀಗೆ ಪೋಸ್ ಕೊಟ್ಟಿದ್ದಾರೆ. ಇಂದು ಮೊದಲ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ. ಜಿಯೋ ಸಿನಿಮಾದಲ್ಲಿ ಎಲ್ಲಾ ಕಾರ್ಯಕ್ರಮಗಳ ನೇರಪ್ರಸಾರ ವೀಕ್ಷಿಸಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ಬರುತ್ತಿದ್ದಂತೇ ಹಾರ್ದಿಕ್ ಪಾಂಡ್ಯಗೆ ಗಾಯವೆಲ್ಲಾ ಮಾಯ