Publish Date: Sun, 12 Mar 2023 (08:50 IST)
Updated Date: Sun, 12 Mar 2023 (09:17 IST)
ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಸೋಲೇ ಅರಿಯದೇ ಮೆರೆದಾಡುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಇಂದು ಯುಪಿ ವಾರಿಯರ್ಸ್ ವಿರುದ್ಧ ಪಂದ್ಯವಾಡಲಿದೆ.
ಹರ್ಮನ್ ಪ್ರೀತ್ ಕೌರ್ ಬಳಗ ಇದುವರೆಗೆ ಆಡಿದ ಎಲ್ಲಾ ಪಂದ್ಯಗಳಲ್ಲೂ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಮಿಂಚಿದ್ದಾರೆ. ಹೀಗಾಗಿ ಈ ಕೂಟದ ಬಲಿಷ್ಠ ತಂಡವಾಗಿದೆ. ಹೇಲಿ ಮ್ಯಾಥ್ಯೂಸ್ ಬ್ಯಾಟಿಂಗ್, ಐಸಾ ಇಸಾಕೆ ಮುಂಬೈ ಶಕ್ತಿ.
ಅತ್ತ ಯುಪಿ ವಾರಿಯರ್ಸ್ ಆರಂಭಿಕ ಪಂದ್ಯದಲ್ಲಿ ಎಡವಿದರೂ ಈಗಷ್ಟೇ ಗೆಲುವಿನ ಹಳಿಗೆ ಮರಳುತ್ತಿದೆ. ಕಳೆದ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಗೆದ್ದ ಉತ್ಸಾಹದಲ್ಲಿದೆ. ಹೀಗಾಗಿ ಇಂದು ಮುಂಬೈಗೆ ಸವಾಲಾಗುವ ನಿರೀಕ್ಷೆಯಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.